HomeKarnatakaಸಾಲ ಸೌಲಭ್ಯ ಪಡೆಯಬಯಸುವ ವಿಶ್ವಕರ್ಮ ಸಮುದಾಯದವರಿಗೆ ಇಲ್ಲಿದೆ ಮಾಹಿತಿ

ಸಾಲ ಸೌಲಭ್ಯ ಪಡೆಯಬಯಸುವ ವಿಶ್ವಕರ್ಮ ಸಮುದಾಯದವರಿಗೆ ಇಲ್ಲಿದೆ ಮಾಹಿತಿ

ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ 2024-25 ನೇ ಸಾಲಿನ ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಅರಿವು-ಶೈಕ್ಷಣಿಕ ನೇರ ಸಾಲ ಯೋಜನೆ (ಹೊಸದು), ಅರಿವು ಶೈಕ್ಷಣಿಕ ಸಾಲ ಯೋಜನೆ (ನವೀಕರಣ), ಗಂಗಾ ಕಲ್ಯಾಣ ಯೋಜನೆ, ಸ್ವಯಂ ಉದ್ಯೋಗ ನೇರಸಾಲ (ಬ್ಯಾಂಕ್ ಗಳ ಸಹಯೋಗದೊಂದಿಗೆ), ಸ್ವಾವಲಂಬಿ ಸಾರಥಿ ಯೋಜನೆ, ವಿದೇಶಿ ವ್ಯಾಸಂಗ ಯೋಜನೆ, ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆಗಳಿಗೆ ಸಾಲ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸಾಲ ಸೌಲಭ್ಯವನ್ನು ಪಡೆಯಲು ಇಚ್ಛಿಸುವರು ಬೆಂಗಳೂರು –ಒನ್/ಕರ್ನಾಟಕ-ಒನ್/ಅಟಲ್-ಜಿ ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಆನ್ ಲೈನ್ ಮೂಲಕ ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬಹುದು. ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆಯಡಿ ಅರ್ಜಿಗಳನ್ನು https://www.kaushalkar.com ಮೂಲಕ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ.

ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್: https://kvcdcl.karnataka.gov.in ಗೆ ಅಥವಾ ನಿಗಮದ ಜಿಲ್ಲಾ ಕಛೇರಿಯ ದೂರವಾಣಿ ಸಂಖ್ಯೆ: 080-23539601 ಅಥವಾ ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಕಚೇರಿ ಸಮಯದಲ್ಲಿ ಸಂಪರ್ಕಿಸಬಹುದು ಎಂದು ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ನಿಯಮಿತದ ಜಿಲ್ಲಾ ವ್ಯಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular