‘ಮೌಲಾನಾ ಆಜಾದ್’ ಪದವಿ ಪೂರ್ವ ಕಾಲೇಜಿನಲ್ಲಿ ಅತಿಥಿ ಶಿಕ್ಷಕ, ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ

ಬಳ್ಳಾರಿ : ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಕಂಪ್ಲಿಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಬಳ್ಳಾರಿ ನಗರದ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಮಾದರಿ ಪದವಿ ಪೂರ್ವ ಕಾಲೇಜಿನಲ್ಲಿ 2025-26 ನೇ ಶೈಕ್ಷಣಿಕ ಸಾಲಿಗೆ ಖಾಲಿ ಇರುವ ಅತಿಥಿ ಶಿಕ್ಷಕ ಮತ್ತು ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹ ವಿದ್ಯಾರ್ಹತೆವುಳ್ಳ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅತಿಥಿ ಶಿಕ್ಷಕರ ಹುದ್ದೆಗೆ ಬಿಎಸ್ಸಿ ಬಿಇಡಿ ಮತ್ತು ಅತಿಥಿ ಉಪನ್ಯಾಸಕರ ಹುದ್ದೆಗೆ ಎಂಎ ಬಿಇಡಿ ಅಥವಾ ಎಂಎಸ್ಸಿ ಬಿಇಡಿ ವಿದ್ಯಾರ್ಹತೆ ಹೊಂದಿದ ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ.

ಮಾಹಿತಿಗಾಗಿ ಕಂಪ್ಲಿಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮೊ.7353346069 ಮತ್ತು ಬಳ್ಳಾರಿ ನಗರದ ಬೆಳಗಲ್ಲು ರಸ್ತೆಯ ಅಲ್ಪಸಂಖ್ಯಾತರ ಮೌಲನಾ ಆಜಾದ್ ಮಾದರಿ ಮಾದರಿ ಪದವಿ ಪೂರ್ವ ಕಾಲೇಜಿನ ಮೊ.8861623814 ಅಥವಾ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮAದಿರ ಹತ್ತಿರದ ಮೌಲನಾ ಆಜಾದ್ ಭವನದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ(ದೂ.08392-200125) ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read