HomeKarnatakaಬೆಂಗಳೂರು : ಗೌರವಧನದ ಆಧಾರದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು : ಗೌರವಧನದ ಆಧಾರದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ತಾತ್ಕಾಲಿಕವಾಗಿ ಗೌರವಧನ ಆಧಾರದ ಮೇರೆಗೆ ಖಾಲಿ ಇರುವ ಜಿಲ್ಲಾ ಕಾರ್ಯಕ್ರಮ ಸಹಾಯಕರು- 01 ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ: ನಿರ್ವಹಣೆ /ಸಾಮಾಜಿಕ ವಿಜ್ಞಾನ/ ಪೋಷಣೆಯಲ್ಲಿ / ಪದವಿ / ಸ್ನಾತಕೋತ್ತರ ಡಿಪ್ಲೋಮಾ ಹೊಂದಿರಬೇಕು. ಮೇಲ್ವಿಚಾರಣಾ ಕೌಶಲ್ಯಗಳೊಂದಿಗೆ ಸಾಮರ್ಥ್ಯ ನಿರ್ಮಾಣದಲ್ಲಿ ಕನಿಷ್ಠ 2 ವರ್ಷಗಳ ಕೆಲಸದ ಅನುಭವ ಹೊಂದಿರಬೇಕು. ವಯೋಮಿತಿ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 45 ವರ್ಷ ಮೀರಿರಬಾರದು.
ಆಸಕ್ತ ಅಭ್ಯರ್ಥಿಗಳು ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಡಾ. ಎಂ.ಹೆಚ್. ಮರಿಗೌಡ ರಸ್ತೆ, ಬೆಂಗಳೂರು ನಗರ ಜಿಲ್ಲೆ -560 029 ಇಲ್ಲಿ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಸೂಕ್ತ ದಾಖಲೆಗಳೊಂದಿಗೆ ಅರ್ಜಿಯನ್ನು ಅಕ್ಟೋಬರ್ 11 ರ ಸಂಜೆ 5.30 ರೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 080-29578688 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular