HomeLatest Newsಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಶಿಬಿರಕ್ಕೆ ಆಹ್ವಾನ

ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಶಿಬಿರಕ್ಕೆ ಆಹ್ವಾನ

ಬೆಂಗಳೂರು :   ಕೆನರಾ ಬ್ಯಾಂಕ್‌ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಆಗಸ್ಟ್ 11, 2025 ರಿಂದ 13 ದಿನಗಳ ಕಾಲ ನಿರುದ್ಯೋಗಿ ಪುರುಷರು ಹಾಗೂ ಮಹಿಳೆಯರಿಗೆ ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ.

ಅಭ್ಯರ್ಥಿಯು 18 ರಿಂದ 35 ವರ್ಷ ವಯಸ್ಸಿನವರಾಗಿರಬೇಕು. ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಹಾಗೂ ಮಹಿಳೆಯರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ನೀಡಲಾಗುವುದು.

ಆಸಕ್ತಿಯುಳ್ಳ ಅಭ್ಯರ್ಥಿಗಳು ಆಗಸ್ಟ್ 06, 2025 ರಂದು ಬೆಳಿಗ್ಗೆ 9.00 ಗಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ (ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ನೇರ ಸಂದರ್ಶನಕ್ಕೆ ವಿದ್ಯಾರ್ಹತೆಗಳೊಂದಿಗೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗಬೇಕಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 9505894247, 8970476050, 9591514754, 9686248369, 8970446644 ಗಳಿಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular