HomeKarnatakaನಾಳಿನ ಸರ್ವಪಕ್ಷ ಸಭೆಗೆ ಬಿಜೆಪಿಯ ಮೂವರು ಮಾಜಿ ಮುಖ್ಯಮಂತ್ರಿಗಳಿಗೆ ಆಹ್ವಾನ

ನಾಳಿನ ಸರ್ವಪಕ್ಷ ಸಭೆಗೆ ಬಿಜೆಪಿಯ ಮೂವರು ಮಾಜಿ ಮುಖ್ಯಮಂತ್ರಿಗಳಿಗೆ ಆಹ್ವಾನ

ಬೆಂಗಳೂರು : ನಾಳೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ನಡೆಯಲಿದ್ದು , ಬಿಜೆಪಿಯ ಮೂವರು  ಮಾಜಿ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಲಾಗಿದೆ.

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಡಿವಿ ಸದಾನಂದಗೌಡ ಅವರಿಗೆ ಸರ್ವಪಕ್ಷ ಸಭೆಗೆ ಆಹ್ವಾನ ನೀಡಲಾಗಿದೆ. ಪತ್ರದ ಮೂಲಕ ಬಿ.ಎಸ್.ಯಡಿಯೂರಪ್ಪ, ಬೊಮ್ಮಾಯಿಗೆ ಆಹ್ವಾನಿಸಿದ್ದು, ಡಿ.ವಿ.ಸದಾನಂದಗೌಡಗೆ ದೂರವಾಣಿ ಮೂಲಕ ಆಹ್ವಾನ ನೀಡಲಾಗಿದೆ.

ನಾಳೆ ಬುಧವಾರ ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿದ್ದು, ಮಾಜಿ ಸಿಎಂ ಕುಮಾರಸ್ವಾಮಿಗೆ ಕೂಡ ಆಹ್ವಾನ ನೀಡಲಾಗಿದೆ. ಬುಧವಾರ ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿದ್ದು, ಕಾವೇರಿ, ಮಹದಾಯಿ, ಕೃಷ್ಣಾ ನದಿ ವಿವಾದ ಸೇರಿದಂತೆ ಹಲವು ವಿಚಾರವಾಗಿ ಸರ್ವಪಕ್ಷ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular