ಬೆಂಗಳೂರು: ಮಾಜಿ ಸಂಸದೆ, ನಟಿ ರಮ್ಯಾ ಅವರಿಗೆ ಜಾಲತಾಣದಲ್ಲಿ ಅಶ್ಲೀಲ ಚಿತ್ರ ಹಾಗೂ ಬೆದರಿಕೆ ಸಂದೇಶ ಕಳುಹಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
47 ಜನರ ಐಪಿ ವಿಳಾಸ ಪತ್ತೆ ಮಾಡಲಾಗಿದೆ. 15 ಮಂದಿಯನ್ನು ಸಿಸಿಬಿ ಪೊಲೀಸರು ಈಗಾಗಲೇ ಗುರುತಿಸಿದ್ದು, ನಾಲ್ವರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರಮ್ಯಾ ಅವರಿಂದಲೂ ಮಾಹಿತಿ ಪಡೆಯಲಾಗಿದೆ. ಕೋಲಾರ, ಮಂಡ್ಯ, ಚಿತ್ರದುರ್ಗ, ಬೆಂಗಳೂರು, ಬಳ್ಳಾರಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ಉಳಿದ ಖಾತೆದಾರರ ಹುಡುಕಾಟ ನಡೆಸಲಾಗುತ್ತಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ಕೆಲವರು ಕ್ಷಮೆ ಕೇಳಿ ತಪ್ಪೊಪ್ಪಿಕೊಂಡಿದ್ದಾರೆ ಎಂದು ಹೇಳಲಾಗಿದೆ.