IPL ಅಭ್ಯಾಸ ಪಂದ್ಯದ ವೀಕ್ಷಣೆಗೂ ಟಿಕೆಟ್ ನಿಗದಿ….!

ಚುಟುಕು ಕ್ರಿಕೆಟ್ ಎಂದೇ ಹೆಸರಾಗಿರುವ ಐಪಿಎಲ್ 16 ನೇ ಆವೃತ್ತಿ ಸದ್ಯದಲ್ಲಿಯೇ ಆರಂಭವಾಗಲಿದೆ. ಈಗಾಗಲೇ ಹರಾಜು ಪ್ರಕ್ರಿಯೆ ಪೂರ್ಣಗೊಂಡಿದ್ದು, ಪಂದ್ಯಗಳ ಆರಂಭಕ್ಕಾಗಿ ಕ್ರಿಕೆಟ್ ಪ್ರಿಯರು ಕಾತರದಿಂದ ಕಾಯುತ್ತಿದ್ದಾರೆ.

ಇದರ ಮಧ್ಯೆ ಏಪ್ರಿಲ್ 2ರಂದು ಮುಂಬೈ ವಿರುದ್ಧ ಸೆಣಸಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮಾರ್ಚ್ 26ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭ್ಯಾಸ ಪಂದ್ಯವನ್ನು ಆಡಲಿದೆ. ಇದರಲ್ಲಿ ಎಲ್ಲಾ ಆಟಗಾರರು ಪಾಲ್ಗೊಳ್ಳಲಿದ್ದಾರೆ.

ಇದೇ ಸಂದರ್ಭದಲ್ಲಿ ಕ್ರಿಸ್ ಗೇಲ್ ಹಾಗೂ ಡಿವಿಲಿಯರ್ಸ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಲ್ ಆಫ್ ಫೇಮ್ ಗೆ ಸೇರ್ಪಡೆಗೊಳಿಸಲಾಗುತ್ತಿದ್ದು, ಸೋನು ನಿಗಮ್ ಸೇರಿದಂತೆ ವಿವಿಧ ಕಲಾವಿದರಿಂದ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ.

ಮಾರ್ಚ್ 26ರ ಸಂಜೆ 4 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಅಭ್ಯಾಸ ಪಂದ್ಯ, ಸಂಗೀತ ಹಾಗೂ ಹಾಲ್ ಆಫ್ ಫೇಮ್ ಸೇರ್ಪಡೆ ಕಾರ್ಯಕ್ರಮ ನಡೆಯಲಿದ್ದು, ಇದಕ್ಕಾಗಿ ಕನಿಷ್ಠ 640 ರಿಂದ ಗರಿಷ್ಠ 7,500 ರೂ. ವರೆಗೆ ದರ ನಿಗದಿಪಡಿಸಲಾಗಿದೆ. ಟಿಕೆಟ್ ಗಳನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಅಧಿಕೃತ ವೆಬ್ ಸೈಟ್ ಮೂಲಕ ಖರೀದಿಸಬಹುದಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read