HomeLive Newsಐಪಿಎಲ್ 2024; ಇಂದು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ಮುಖಾಮುಖಿ

ಐಪಿಎಲ್ 2024; ಇಂದು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ಮುಖಾಮುಖಿ

ನಿನ್ನೆ ಚೆನ್ನೈನ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಆರ್‌ಸಿಬಿ ಎದುರು ಭರ್ಜರಿ ಜಯ ಸಾಧಿಸುವ ಮೂಲಕ ಶುಭಾರಂಭ ಮಾಡಿದೆ. ಇಂದು ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಸೆಣಸಾಡಲಿದ್ದು, ಐಪಿಎಲ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ಗಾಯದ ಸಮಸ್ಯೆಯಿಂದ ಬಳಲಿದ್ದ ರಿಷಬ್ ಪಂತ್ ಕ್ರಿಕೆಟ್ನಿಂದ ದೂರ ಉಳಿದಿದ್ದರು,  ಚೇತರಿಸಿಕೊಳ್ಳುವ ಮೂಲಕ ಇದೀಗ ಡೆಲ್ಲಿ ಕ್ಯಾಪಿಟಲ್ ತಂಡಕ್ಕೆ ಮರಳಿದ್ದು, ಅವರ ಅಭಿಮಾನಿಗಳಲ್ಲಿ ಸಂತಸ ಮೂಡಿದೆ.

ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳಲ್ಲಿ ಆಲ್ ರೌಂಡರ್‌ ಗಳೇ ಹೆಚ್ಚಾಗಿದ್ದು, ಇಂದು ಕ್ರಿಕೆಟ್ ಪ್ರೇಮಿಗಳಿಗೆ ಮನರಂಜನೆಯ ರಸದೌತಣವೇ ಸಿಗಲಿದೆ. ಚಂಡಿಗರ್ ನಲ್ಲಿ ಈ ಪಂದ್ಯ ನಡೆಯಲಿದ್ದು, ಇದಾದ ಬಳಿಕ ಮತ್ತೊಂದು ಪಂದ್ಯದಲ್ಲಿ ಸನ್ ರೈಸರ್ಸ್ ಹೈದ್ರಾಬಾದ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ಮುಖಮುಖಿಯಾಗಲಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular