HomeLive Newsಐಪಿಎಲ್ 2024; ಇಂದು ಮುಂಬೈ ಇಂಡಿಯನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಕಾದಾಟ

ಐಪಿಎಲ್ 2024; ಇಂದು ಮುಂಬೈ ಇಂಡಿಯನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಕಾದಾಟ

ಐಪಿಎಲ್ ಪ್ಲೇ ಆಫ್ ಪಂದ್ಯ ಪ್ರಾರಂಭವಾಗಲು ಇನ್ನೇನು ನಾಲ್ಕು ದಿನ ಬಾಕಿ ಉಳಿದಿದ್ದು, ಈಗಾಗಲೇ ಮೂರು ತಂಡಗಳು ತಮ್ಮ ಸ್ಥಾನವನ್ನು ಖಚಿತಪಡಿಸಿಕೊಂಡಿವೆ. ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜಿಂಗ್ ಬೆಂಗಳೂರು ತಂಡ ಪ್ಲೇ ಆಫ್ ನ ನಾಲ್ಕನೇ ತಂಡವಾಗಿ ಆಯ್ಕೆಯಾಗಲು  ನಾಳೆ ಜಿದ್ದಾಜಿದ್ದಿ ಹೋರಾಟ ನಡೆಸಲಿವೆ.

ಇಂದು ಮುಂಬೈ ಇಂಡಿಯನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಮುಖಾಮುಖಿಯಾಗಲಿದ್ದು, ಈ ಪಂದ್ಯಕ್ಕಾಗಿ ಕ್ರಿಕೆಟ್ ಪ್ರೇಮಿಗಳು ಕಾತರದಿಂದ ಕಾಯುತ್ತಿದ್ದಾರೆ. ಈ ಬಾರಿ ಹಾರ್ದಿಕ್ ಪಾಂಡ್ಯ ಅವರನ್ನು ನಾಯಕರನ್ನಾಗಿ ಮಾಡಿದರು ಮುಂಬೈ ಇಂಡಿಯನ್ಸ್ ನ ಕಳಪೆ ಪ್ರದರ್ಶನ ಮುಂದುವರೆದಿದೆ. ಇನ್ನು ಲಕ್ನೋ ತಂಡ  ಸತತ ಮೂರು ಸೋಲುಗಳಿಂದ ತನ್ನ ಪ್ಲೇ ಆಫ್ ಆಸೆಯನ್ನು ನುಚ್ಚುನೂರು ಮಾಡಿಕೊಂಡಿದೆ.

ಈಗಾಗಲೇ ಈ ಎರಡು ತಂಡಗಳು ಪ್ಲೇ ಆಫ್ ರೇಸ್ ನಿಂದ ಹೊರ ಬಿದ್ದಿದ್ದು, ಪ್ರತಿಷ್ಠೆಗಾಗಿ ಈ ಪಂದ್ಯವನ್ನು ಗೆಲ್ಲಲು ನೋಡುತ್ತಿವೆ. ಮುಂಬೈ ಇಂಡಿಯನ್ಸ್ ಮತ್ತು ಲಕ್ನೋ ತಂಡಕ್ಕೆ ಇದು ಕಡೆಯ ಪಂದ್ಯವಾಗಿದ್ದು, ಉತ್ಸಾಹದಿಂದ ಕಣಕ್ಕಿಳಿಯಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular