ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಐಪಿಎಲ್ 2026ರ ಉದ್ಘಾಟನಾ ಪಂದ್ಯದಲ್ಲಿ ಆರ್‌ಸಿಬಿ ಟಾಸ್ ಗೆದ್ದು ಬೌಲಿಂಗ್ ಆರಿಸಿಕೊಂಡಿದ್ದು, ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ.
ಅದರಂತೆ ಬ್ಯಾಟಿಂಗ್ ಆರಂಭಿಸಿರುವ ಸನ್ ರೈಸರ್ಸ್ ಹೈದರಾಬಾದ್ ಪರ ಅಭಿಷೇಕ್ ಶರ್ಮಾ ಹಾಗೂ ಟ್ರಾವಿಸ್ ಹೆಡ್ ಕಣಕ್ಕಿಳಿದರು. ಒಂದು ಸಿಕ್ಸರ್ ಬಾರಿಸಿದ ಅಭಿಷೇಕ್ ಶರ್ಮಾ ಜೇಕಬ್ ಡಫಿ ಎಸೆದ ಮೂರನೇ ಓವರ್‌ನ ಮೊದಲ ಎಸೆತದಲ್ಲಿ ದೊಡ್ಡ ಹೊಡೆತ ಬಾರಿಸಲು ಕೈಹಾಕಿ ವಿಕೆಟ್ ಕೀಪರ್ ಜಿತೇಶ್ ಶರ್ಮಾಗೆ ಕ್ಯಾಚ್ ನೀಡಿದರು.
ಈ ಮೂಲಕ ಅಭಿಷೇಕ್ ಶರ್ಮಾ 8 ಎಸೆತಗಳಲ್ಲಿ ಕೇವಲ 7 ರನ್ ಕಲೆಹಾಕಿ ವಿಕೆಟ್ ಒಪ್ಪಿಸಿ ತಮ್ಮ ಫ್ಲಾಪ್ ಶೋವನ್ನು ಐಪಿಎಲ್‌ನಲ್ಲೂ ಮುಂದುವರಿಸಿದ್ದಾರೆ. ಇದೇ ವರ್ಷ ನಡೆದ ಐಸಿಸಿ ಟಿ ಟ್ವೆಂಟಿ ವಿಶ್ವಕಪ್‌ನಲ್ಲೂ ಸಹ ಉತ್ತಮ ಆಟವನ್ನಾಡುವಲ್ಲಿ ವಿಫಲವಾಗಿದ್ದ ಅಭಿಷೇಕ್ ಶರ್ಮಾ ಹೀನಾಯವಾಗಿ ಟ್ರೋಲ್ ಆಗಿದ್ದರು.
ಜಿಂಬಾಬ್ವೆ ವಿರುದ್ಧದ ಪಂದ್ಯ ಹಾಗೂ ಫೈನಲ್ ಪಂದ್ಯದಲ್ಲಿ ಅರ್ಧಶತಕ ಬಾರಿಸಿದ್ದು ಬಿಟ್ಟರೆ ಉಳಿದ ಪಂದ್ಯಗಳಲ್ಲಿ ಅಭಿಷೇಕ್ ಮಕಾಡೆ ಮಲಗಿದ್ದರು. ಇದೀಗ ಮತ್ತೆ ಒಂದಂಕಿಗೆ ವಿಕೆಟ್ ಒಪ್ಪಿಸಿರುವ ಅಭಿಷೇಕ್ ಶರ್ಮಾ ಸಾಮಾಜಿಕ ಜಾಲತಾಣದಲ್ಲಿ ಟೀಕೆಗೆ ಗುರಿಯಾಗಿದ್ದಾರೆ.

