HomeIPL 2026IPL 2026: ಅತಿಹೆಚ್ಚು ಬಾರಿ ಡಕ್‌ಔಟ್ ಆದ ಆಟಗಾರರ ಪಟ್ಟಿಯಲ್ಲಿ ರೋಹಿತ್, ಸಂಜು ಹಿಂದಿಕ್ಕಿದ ಅಭಿಷೇಕ್...

IPL 2026: ಅತಿಹೆಚ್ಚು ಬಾರಿ ಡಕ್‌ಔಟ್ ಆದ ಆಟಗಾರರ ಪಟ್ಟಿಯಲ್ಲಿ ರೋಹಿತ್, ಸಂಜು ಹಿಂದಿಕ್ಕಿದ ಅಭಿಷೇಕ್ ಶರ್ಮಾ

ಇಂದು ( ಏಪ್ರಿಲ್ 13 ) ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಐಪಿಎಲ್ 2026ರ ಲೀಗ್ ಹಂತದ 21ನೇ ಪಂದ್ಯ ನಡೆಯುತ್ತಿದ್ದು, ಸನ್ ರೈಸರ್ಸ್ ಹೈದರಾಬಾದ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿವೆ.

ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ಬೌಲಿಂಗ್ ಆರಿಸಿಕೊಂಡು ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಸನ್ ರೈಸರ್ಸ್ ಹೈದರಾಬಾದ್ ಜೋಫ್ರಾ ಆರ್ಚರ್ ಮಾಡಿದ ಮೊದಲ ಓವರ್‌ನ ಮೊದಲ ಎಸೆತದಲ್ಲೇ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.

ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ರವಿ ಬಿಷ್ಣೋಯಿಗೆ ಕ್ಯಾಚ್ ನೀಡಿ ಡಕ್‌ಔಟ್ ಆದರು. ಈ ಮೂಲಕ ರೋಹಿತ್ ಶರ್ಮಾ ಹಾಗೂ ಸಂಜು ಸ್ಯಾಮ್ಸನ್‌ರನ್ನು ಹಿಂದಿಕ್ಕಿ ಟಿ ಟ್ವೆಂಟಿ ಕ್ರಿಕೆಟ್‌ನಲ್ಲಿ ವರ್ಷವೊಂದರಲ್ಲಿ ಅತಿಹೆಚ್ಚು ಬಾರಿ ಡಕ್‌ಔಟ್ ಆದ ಭಾರತದ ಕ್ರಿಕೆಟಿಗ ಎಂಬ ಕೆಟ್ಟ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಟಿ ಟ್ವೆಂಟಿ ಕ್ರಿಕೆಟ್‌ನಲ್ಲಿ ಅತಿಹೆಚ್ಚು ಬಾರಿ ಡಕ್‌ಔಟ್ ಆದ ಭಾರತದ ಕ್ರಿಕೆಟಿಗರು

ಅಭಿಷೇಕ್ ಶರ್ಮಾ ( 2026 ) – 7 ಬಾರಿ ( 18 ಇನ್ನಿಂಗ್ಸ್ )

ರೋಹಿತ್ ಶರ್ಮಾ ( 2018 ) – 6 ಬಾರಿ ( 32 ಇನ್ನಿಂಗ್ಸ್ )

ಸಂಜು ಸ್ಯಾಮ್ಸನ್ ( 2024 ) – 6 ಬಾರಿ ( 32 ಇನ್ನಿಂಗ್ಸ್ )

For Latest News Updates, Join Our Whatsapp Community🚩
Srinivasa A Kollegala
Srinivasa A Kollegala
Srinivasa A has over 6 years of experience in journalism. He has worked as a Social Media Executive at OneIndia, Sub-Editor at MyKhel and Filmibeat Kannada, and led the digital team at Andolana newspaper as Digital Head.
RELATED ARTICLES

LEAVE A REPLY

Please enter your comment!
Please enter your name here

Most Popular