ನಿನ್ನೆ ( ಮೇ 31 ) ಅಹ್ಮದಾಬಾದ್‌ನ ನರೇಂದ್ರ ಮೋದಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026ರ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗುಜರಾತ್ ಟೈಟನ್ಸ್ ವಿರುದ್ಧ 5 ವಿಕೆಟ್‌ಗಳ ಗೆಲುವನ್ನು ದಾಖಲಿಸುವ ಮೂಲಕ ಎರಡನೇ ಬಾರಿಗೆ ಟ್ರೋಫಿಯನ್ನು ಎತ್ತಿಹಿಡಿಯಿತು.
ಪಂದ್ಯದಲ್ಲಿ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗುಜರಾತ್ ಟೈಟನ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಅದರಂತೆ ಗುಜರಾತ್ ಟೈಟನ್ಸ್ ಆರ್‌ಸಿಬಿ ಬೌಲಿಂಗ್ ದಾಳಿಗೆ ತತ್ತರಿಸಿ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 155 ರನ್ ಕಲೆಹಾಕಿ 156 ರನ್‌ಗಳ ಸುಲಭ ಗುರಿ ನೀಡಿತು. ಈ ಗುರಿಯನ್ನು ಬೆನ್ನಟ್ಟಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರಾಟ್ ಕೊಹ್ಲಿ ಅರ್ಧಶತಕದ ನೆರವಿನಿಂದ 18 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 161 ರನ್ ಕಲೆಹಾಕಿತು.
ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸತತ ಎರಡನೇ ಟ್ರೋಫಿ ಗೆದ್ದು ಸಂಭ್ರಮಿಸಿದ್ದು, 17 ವರ್ಷ ಕಪ್ ಇಲ್ಲದೇ ಇಂದು ಸತತ ಎರಡನೇ ಬಾರಿಗೆ ಟ್ರೋಫಿ ಎತ್ತಿ ಹಿಡಿದು ಸಂಭ್ರಮಿಸಿದೆ.
ಹೀಗೆ ಚಾಂಪಿಯನ್ ಆಗಿ ಹೊರಹೊಮ್ಮಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ, ರನ್ನರ್ ಅಪ್ ಆದ ಗುಜರಾತ್ ಟೈಟನ್ಸ್ ತಂಡಕ್ಕೆ ಹಾಗೂ ಪ್ಲೇಆಫ್‌ಗೆ ಬಂದ ತಂಡಗಳಿಗೆ ಎಷ್ಟು ಹಣ ಬಹುಮಾನ ಧನವಾಗಿ ಲಭಿಸಿತು ಎಂಬ ಮಾಹಿತಿ ಮುಂದಿದೆ.
ಚಾಂಪಿಯನ್ ಆಗಿ ಹೊರಹೊಮ್ಮಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 20 ಕೋಟಿ ರೂ ಸಿಕ್ಕರೆ, ರನ್ನರ್ ಅಪ್ ಆದ ಗುಜರಾತ್ ಟೈಟನ್ಸ್ ತಂಡಕ್ಕೆ 13 ಕೋಟಿ ಸಿಕ್ಕಿತು, ಮೂರನೇ ಸ್ಥಾನ ಪಡೆದ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ 7 ಕೋಟಿ ಹಾಗೂ ನಾಲ್ಕನೇ ಸ್ಥಾನ ಪಡೆದ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ 6.5 ಕೋಟಿ ಲಭಿಸಿತು.

