HomeIPL 2026IPL 2026: ಆಯುಷ್ ಮ್ಹಾತ್ರೆ ಅಬ್ಬರದ ಅರ್ಧಶತಕ; ಪಂಜಾಬ್‌ಗೆ ಸವಾಲಿನ ಗುರಿ ನೀಡಿದ ಚೆನ್ನೈ

IPL 2026: ಆಯುಷ್ ಮ್ಹಾತ್ರೆ ಅಬ್ಬರದ ಅರ್ಧಶತಕ; ಪಂಜಾಬ್‌ಗೆ ಸವಾಲಿನ ಗುರಿ ನೀಡಿದ ಚೆನ್ನೈ

ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್‌ 2026ರ ಏಳನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಪಂಜಾಬ್ ಕಿಂಗ್ಸ್ ಪರಸ್ಪರ ಮುಖಾಮುಖಿಯಾಗಿವೆ.

ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ಬೌಲಿಂಗ್ ಆರಿಸಿಕೊಂಡು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಚೆನ್ನೈ ಆಯುಷ್ ಮ್ಹಾತ್ರೆ ಅರ್ಧಶತಕದ ನೆರವಿನಿಂದ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 209 ರನ್ ಕಲೆಹಾಕಿ ಪಂಜಾಬ್ ಕಿಂಗ್ಸ್ ತಂಡಕ್ಕೆ 210 ರನ್‌ಗಳ ಗುರಿಯನ್ನು ನೀಡಿದೆ.

ಚೆನ್ನೈ ಸೂಪರ್ ಕಿಂಗ್ಸ್ ಪರ ಆರಂಭಿಕರಾಗಿ ಕಣಕ್ಕಿಳಿದ ಸಂಜು ಸ್ಯಾಮ್ಸನ್ ಕೇವಲ 7 ರನ್‌ಗೆ ವಿಕೆಟ್ ಒಪ್ಪಿಸಿದರೆ, ನಾಯಕ ರುತುರಾಜ್ ಗಾಯಕ್ವಾಡ್ 28 ರನ್ ಕಲೆಹಾಕಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಅಬ್ಬರಿಸಿದ ಆಯುಷ್ ಮ್ಹಾತ್ರೆಗೆ ಸಾಥ್ ಕೊಟ್ಟರು. ಮ್ಹಾತ್ರೆ 43 ಎಸೆತಗಳಲ್ಲಿ 6 ಬೌಂಡರಿ ಹಾಗೂ 5 ಸಿಕ್ಸರ್ ಸಹಿತ 73 ರನ್ ಬಾರಿಸಿದರು. ಇನ್ನುಳಿದಂತೆ ಕಾರ್ತಿಕ್ ಶರ್ಮಾ ಕೇವಲ 1 ರನ್, ಸರ್ಫರಾಜ್ ಖಾನ್ 12 ಎಸೆತಗಳಲ್ಲಿ ಅಬ್ಬರದ 32, ಶಿವಮ್ ದುಬೆ 28 ಎಸೆತಗಳಲ್ಲಿ ಅಜೇಯ 48 ರನ್ ಹಾಗೂ ಪ್ರಶಾಂತ್ ವೀರ್ ಅಜೇಯ 6 ರನ್ ಗಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಜಯ್‌ಕುಮಾರ್ ವೈಶಾನ್ ಎರಡು ವಿಕೆಟ್, ಕ್ಷೇವಿಯರ್ ಬಾರ್ಟ್ಲೆಟ್, ಮಾರ್ಕೊ ಯಾನ್ಸೆನ್ ಹಾಗೂ ಯುಜ್ವೇಂದ್ರ ಚಹಲ್ ತಲಾ ಒಂದೊಂದು ವಿಕೆಟ್ ಪಡೆದರು.

For Latest News Updates, Join Our Whatsapp Community🚩
Srinivasa A Kollegala
Srinivasa A Kollegala
Srinivasa A has over 6 years of experience in journalism. He has worked as a Social Media Executive at OneIndia, Sub-Editor at MyKhel and Filmibeat Kannada, and led the digital team at Andolana newspaper as Digital Head.
RELATED ARTICLES

LEAVE A REPLY

Please enter your comment!
Please enter your name here

Most Popular