HomeIPL 2026IPL 2026: ಸಂಜು, ಮ್ಹಾತ್ರೆ, ಬ್ರೆವಿಸ್ ಉತ್ತಮ ಆಟದಿಂದ ಕೊಲ್ಕತ್ತಾಗೆ ಸವಾಲಿನ ಗುರಿ ನೀಡಿದ ಚೆನ್ನೈ

IPL 2026: ಸಂಜು, ಮ್ಹಾತ್ರೆ, ಬ್ರೆವಿಸ್ ಉತ್ತಮ ಆಟದಿಂದ ಕೊಲ್ಕತ್ತಾಗೆ ಸವಾಲಿನ ಗುರಿ ನೀಡಿದ ಚೆನ್ನೈ

ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿಂದು ( ಏಪ್ರಿಲ್ 14 ) ಐಪಿಎಲ್ 2026ರ ಲೀಗ್ ಹಂತದ 22ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಿವೆ.

ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ಸಂಜು ಸ್ಯಾಮ್ಸನ್, ಆಯುಷ್ ಮ್ಹಾತ್ರೆ ಹಾಗೂ ಡಿವಾಲ್ಡ್ ಬ್ರೆವಿಸ್ ಉತ್ತಮ ಆಟದ ನೆರವಿನಿಂದ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 192 ರನ್ ಕಲೆಹಾಕಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ 193 ರನ್‌ಗಳ ಗುರಿಯನ್ನು ನೀಡಿದೆ.

ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ನಾಯಕ ರುತುರಾಜ್ ಗಾಯಕ್ವಾಡ್ ಕೇವಲ 7 ರನ್‌ಗೆ ಔಟ್ ಆಗುವ ಮೂಲಕ ಮತ್ತೊಮ್ಮೆ ವಿಫಲರಾದರು. ಮತ್ತೋರ್ವ ಆರಂಭಿಕ ಆಟಗಾರ ಸಂಜು ಸ್ಯಾಮ್ಸನ್ 32 ಎಸೆತಗಳಲ್ಲಿ 48 ರನ್ ಗಳಿಸಿದರು. ರುತುರಾಜ್ ವಿಕೆಟ್ ಬಿದ್ದ ಬೆನ್ನಲೇ ಕಣಕ್ಕಿಳಿದ ಆಯುಷ್ ಮ್ಹಾತ್ರೆ 17 ಎಸೆತಗಳಲ್ಲಿ 38 ರನ್ ಚಚ್ಚಿದರು. ಇನ್ನುಳಿದಂತೆ ಡಿವಾಲ್ಡ್ ಬ್ರೆವಿಸ್ 29 ಎಸೆತಗಳಲ್ಲಿ 41 ರನ್ ಬಾರಿಸಿದರೆ, ಸರ್ಫರಾಜ್ ಖಾನ್ 23, ಶಿವಮ್ ದುಬೆ ಅಜೇಯ 13 (12) ಹಾಗೂ ಜೇಮಿ ಓವರ್ಟನ್ ಅಜೇಯ 7 (6) ರನ್ ಗಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೊಲ್ಕತ್ತಾ ನೈಟ್ ರೈಡರ್ಸ್ ಪರ ಕಾರ್ತಿಕ್ ತ್ಯಾಗಿ ಎರಡು ವಿಕೆಟ್, ಸುನಿಲ್ ನರೈನ್, ಅನುಕುಲ್ ರಾಯ್ ಹಾಗೂ ವೈಭವ್ ಅರೋರಾ ತಲಾ ಒಂದೊಂದು ವಿಕೆಟ್ ಪಡೆದರು.

For Latest News Updates, Join Our Whatsapp Community🚩
Srinivasa A Kollegala
Srinivasa A Kollegala
Srinivasa A has over 6 years of experience in journalism. He has worked as a Social Media Executive at OneIndia, Sub-Editor at MyKhel and Filmibeat Kannada, and led the digital team at Andolana newspaper as Digital Head.
RELATED ARTICLES

LEAVE A REPLY

Please enter your comment!
Please enter your name here

Most Popular