ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 2026ರ ಲೀಗ್ ಹಂತದ 18ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿವೆ.
ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್ ಆರಿಸಿಕೊಂಡು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಅದರಂತೆ ಚೆನ್ನೂ ಸೂಪರ್ ಕಿಂಗ್ಸ್ ಸಂಜು ಸ್ಯಾಮ್ಸನ್ ಶತಕ ಹಾಗೂ ಆಯುಷ್ ಮ್ಹಾತ್ರೆ ಅರ್ಧಶತಕಗಳ ನೆರವಿನಿಂದ 20 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 212 ರನ್ ಕಲೆಹಾಕಿ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ 213 ರನ್‌ಗಳ ಗುರಿ ನೀಡಿದೆ.
ಚೆನ್ನೈ ಸೂಪರ್ ಕಿಂಗ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದ ನಾಯಕ ರುತುರಾಜ್ ಗಾಯಕ್ವಾಡ್ 18 ಎಸೆತಗಳಲ್ಲಿ ಕೇವಲ 15 ರನ್ ಗಳಿಸಿ ನಿರಾಸೆ ಮೂಡಿಸಿದರೆ, ಮತ್ತೋರ್ವ ಆರಂಭಿಕ ಆಟಗಾರ ಸಂಜು ಸ್ಯಾಮ್ಸನ್ ಶತಕ ಬಾರಿಸುವ ಮೂಲಕ ಫಾರ್ಮ್ ಕಂಡುಕೊಂಡಿದ್ದಾರೆ. 56 ಎಸೆತಗಳಲ್ಲಿ 15 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ಅಜೇಯ 115 ರನ್ ಬಾರಿಸಿದರು. ಎರಡನೇ ವಿಕೆಟ್‌ಗೆ ಸಂಜು ಸ್ಯಾಮ್ಸನ್ ಜತೆಯಾದ ಆಯುಷ್ ಮ್ಹಾತ್ರೆ 36 ಎಸೆತಗಳಲ್ಲಿ 3 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 59 ರನ್ ಗಳಿಸಿ ರಿಟೈರ್ಡ್ ಹರ್ಟ್ ಔಟ್ ಆದರು. ಸಂಜು ಸ್ಯಾಮ್ಸನ್ ಹಾಗೂ ಆಯುಷ್ ಮ್ಹಾತ್ರೆ 113 ರನ್‌ಗಳ ಜತೆಯಾಟವನ್ನಾಡಿ ಆರಂಭಿಕ ಆಘಾತ ಅನುಭವಿಸಿದ ತಂಡಕ್ಕೆ ದೊಡ್ಡ ಮಟ್ಟದಲ್ಲಿ ಆಸರೆಯಾದರು. ಶಿವಮ್ ದುಬೆ 10 ಎಸೆತಗಳಲ್ಲಿ ಅಜೇಯ 20 ರನ್ ಗಳಿಸಿದರು.
ಡೆಲ್ಲಿ ಕ್ಯಾಪಿಟಲ್ಸ್ ಪರ ನಾಯಕ ಅಕ್ಷರ್ ಪಟೇಲ್ ಒಂದು ವಿಕೆಟ್ ಪಡೆದರು.

