ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಇಂದು ( ಏಪ್ರಿಲ್ 14 ) ಐಪಿಎಲ್ 2026ರ ಲೀಗ್ ಹಂತದ 22ನೇ ಪಂದ್ಯ ನಡೆಯುತ್ತಿದ್ದು, ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿವೆ.
ಟಾಸ್ ಗೆದ್ದ ಕೊಲ್ಕತ್ತಾ ನೈಟ್ ರೈಡರ್ಸ್ ಬೌಲಿಂಗ್ ಆರಿಸಿಕೊಂಡಿದ್ದು, ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ.
ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು ನಾಲ್ಕು ಪಂದ್ಯಗಳನ್ನಾಡಿರುವ ಚೆನ್ನೈ ಸೂಪರ್ ಕಿಂಗ್ಸ್ ಮೂರರಲ್ಲಿ ಸೋತು, ಉಳಿದೊಂದು ಪಂದ್ಯದಲ್ಲಿ ಗೆದ್ದು ಅಂಕಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಲ್ಲಿದ್ದು, ಆಡಿರುವ ಎಲ್ಲ ನಾಲ್ಕು ಪಂದ್ಯಗಳನ್ನೂ ಸೋತಿರುವ ಕೊಲ್ಕತ್ತಾ ನೈಟ್ ರೈಡರ್ಸ್ ಕೊನೆಯ ಸ್ಥಾನದಲ್ಲಿದೆ.
ಕೊಲ್ಕತ್ತಾ ನೈಟ್ ರೈಡರ್ಸ್ ಆಡುವ ಬಳಗ: ಅಜಿಂಕ್ಯ ರಹಾಣೆ (ನಾಯಕ), ಕ್ಯಾಮರನ್ ಗ್ರೀನ್, ಅಂಕ್ರಿಶ್ ರಘುವಂಶಿ (ವಿಕೆಟ್ ಕೀಪರ್), ರೋವ್‌ಮನ್ ಪೊವೆಲ್, ರಿಂಕು ಸಿಂಗ್, ಸುನೀಲ್ ನರೈನ್, ರಾಮಾಂದೀಪ್ ಸಿಂಗ್, ಅನುಕುಲ್ ರಾಯ್, ವರುಣ್ ಚಕ್ರವರ್ತಿ, ವೈಭವ್ ಅರೋರಾ, ಕಾರ್ತಿಕ್ ತ್ಯಾಗಿ
ಚೆನ್ನೈ ಸೂಪರ್ ಕಿಂಗ್ಸ್ ಆಡುವ ಬಳಗ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್ (ನಾಯಕ), ಆಯುಷ್ ಮಹತ್ರೆ, ಸರ್ಫರಾಜ್ ಖಾನ್, ಶಿವಂ ದುಬೆ, ಡೆವಾಲ್ಡ್ ಬ್ರೆವಿಸ್, ಜೇಮಿ ಓವರ್ಟನ್, ನೂರ್ ಅಹ್ಮದ್, ಅಂಶುಲ್ ಕಾಂಬೋಜ್, ಗುರ್ಜಪ್ನೀತ್ ಸಿಂಗ್, ಖಲೀಲ್ ಅಹ್ಮದ್

