HomeIPL 2026IPL 2026: ಆರ್‌ಸಿಬಿ ಬೌಲಿಂಗ್ ದಾಳಿಗೆ ಡೆಲ್ಲಿ ತತ್ತರ; ಬೆಂಗಳೂರಿಗೆ ಸುಲಭ ಗುರಿ

IPL 2026: ಆರ್‌ಸಿಬಿ ಬೌಲಿಂಗ್ ದಾಳಿಗೆ ಡೆಲ್ಲಿ ತತ್ತರ; ಬೆಂಗಳೂರಿಗೆ ಸುಲಭ ಗುರಿ

ಇಂದು ( ಏಪ್ರಿಲ್ 27 ) ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 2026ರ ಲೀಗ್ ಹಂತದ 39ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿವೆ.

ಪಂದ್ಯದಲ್ಲಿ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಟಿದಾರ್ ಬೌಲಿಂಗ್ ಆರಿಸಿಕೊಂಡು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಡೆಲ್ಲಿ ಕ್ಯಾಪಿಟಲ್ಸ್ ಆರ್‌ಸಿಬಿ ಬೌಲಿಂಗ್ ದಾಳಿಗೆ ತತ್ತರಿಸಿ 16.3 ಓವರ್‌ಗಳಲ್ಲಿ 75 ರನ್‌ಗೆ ಆಲ್‌ಔಟ್ ಆಗಿ ಆರ್‌ಸಿಬಿಗೆ 76 ರನ್‌ಗಳ ಗುರಿ ನೀಡಿದೆ.

ಅದರಂತೆ ಬ್ಯಾಟಿಂಗ್ ಆರಂಭಿಸಿದ ಡೆಲ್ಲಿ ಕ್ಯಾಪಿಟಲ್ಸ್ ಇನ್ನಿಂಗ್ಸ್‌ನ ಎರಡನೇ ಎಸೆತದಲ್ಲೇ ವಿಕೆಟ್ ಕಳೆದುಕೊಂಡು ಕೆಟ್ಟ ಆರಂಭ ಮಾಡಿತು. ಭುವನೇಶ್ವರ್ ಕುಮಾರ್ ಎಸೆದ ಎಸೆತಕ್ಕೆ ಸಹಿಲ್ ಪರಾಖ್ ಕ್ಲೀನ್ ಬೌಲ್ಡ್‌ ಆಗಿ ಪೆವಿಲಿಯನ್ ಸೇರಿಕೊಂಡರು. ಬೆನ್ನಲ್ಲೇ ಕೆಎಲ್ ರಾಹುಲ್ 1 ರನ್, ಸಮೀರ್ ರಿಜ್ವಿ ಡಕ್‌ಔಟ್‌, ಟ್ರಿಸ್ಟನ್ ಸ್ಟಬ್ಸ್ 5, ಅಕ್ಷರ್ ಪಟೇಲ್ ಡಕ್‌ಔಟ್ ಹಾಗೂ ನಿತಿಶ್ ರಾಣಾ ಕೇವಲ 1 ರನ್ ಗಳಿಸಿ ಔಟ್ ಆದರು. ಈ ಮೂಲಕ ಕೇವಲ 8 ರನ್‌ಗೆ ಡೆಲ್ಲಿ 6 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಏಳನೇ ಜತೆಯಾದ ಡೇವಿಡ್ ಮಿಲ್ಲರ್ ಹಾಗೂ ಇಂಪ್ಯಾಕ್ಟ್ ಪ್ಲೇಯರ್ ಅಭಿಷೇಕ್ ಪೊರೆಲ್ ಹಾಗೂ ಡೇವಿಡ್ ಮಿಲ್ಲರ್ 35 ರನ್‌ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ತುಸು ಸುಧಾರಣೆ ತಂದರು. ಮಿಲ್ಲರ್ 19 ರನ್ ಗಳಿಸಿ ಔಟ್ ಆದರು. ಇನ್ನುಳಿದಂತೆ ಕೈಲ್ ಜೆಮಿಸನ್ 12, ಕುಲ್‌ದೀಪ್ ಯಾದವ್ 3, ಏಕಾಂಗಿ ಹೋರಾಟ ನಡೆಸಿ ತಂಡವನ್ನು ಭಾರೀ ಮುಖಭಂಗದಿಂದ ಪಾರು ಮಾಡಿದ ಅಭಿಷೇಕ್ ಪೊರೆಲ್ 30 ರನ್ ಹಾಗೂ ಯಾವುದೇ ರನ್ ಗಳಿಸದ ದುಷ್ಮಂತ ಚಮೀರ ಅಜೇಯರಾಗಿ ಉಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರ್‌ಸಿಬಿ ಪರ ಪವರ್‌ಪ್ಲೇನಲ್ಲೆ ತಲಾ ಮೂರು ವಿಕೆಟ್ ಪಡೆದ ಹೇಜಲ್‌ವುಡ್ ಹಾಗೂ ಭುವಿ ಜೋಡಿ ಡೆಲ್ಲಿ ತಂಡಕ್ಕೆ ಮಾರಕವಾಯಿತು. ಜೋಶ್ ಹೇಜಲ್‌ವುಡ್ ನಾಲ್ಕು ವಿಕೆಟ್, ಭುವನೇಶ್ವರ್ ಕುಮಾರ್ ಮೂರು ವಿಕೆಟ್, ರಸಿಕ್ ಧರ್, ಸುಯಶ್ ಶರ್ಮಾ ಹಾಗೂ ಕೃನಾಲ್ ಪಾಂಡ್ಯ ತಲಾ ಒಂದೊಂದು ವಿಕೆಟ್ ಪಡೆದರು.

For Latest News Updates, Join Our Whatsapp Community🚩
Srinivasa A Kollegala
Srinivasa A Kollegala
Srinivasa A has over 6 years of experience in journalism. He has worked as a Social Media Executive at OneIndia, Sub-Editor at MyKhel and Filmibeat Kannada, and led the digital team at Andolana newspaper as Digital Head.
RELATED ARTICLES

LEAVE A REPLY

Please enter your comment!
Please enter your name here

Most Popular