ಇಂದು ( ಮೇ 27 ) ನ್ಯೂ ಚಂಡೀಗಢ್‌ನ ಮುಲ್ಲಾನ್‌ಪುರ್‌ನ ಮಹಾರಾಜ ಯದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 2026ರ ಎಲಿಮಿನೇಟರ್ ಪಂದ್ಯ ನಡೆಯುತ್ತಿದ್ದು, ಸನ್ ರೈಸರ್ಸ್ ಹೈದರಾಬಾದ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿವೆ.
ಪಂದ್ಯದಲ್ಲಿ ಟಾಸ್ ಗೆದ್ದಿರುವ ಸನ್ ರೈಸರ್ಸ್ ಹೈದರಾಬಾದ್ ಬೌಲಿಂಗ್ ಆರಿಸಿಕೊಂಡಿದ್ದು, ರಾಜಸ್ಥಾನ್ ರಾಯಲ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ.
ಇನ್ನು ಈ ಪಂದ್ಯದಲ್ಲಿ ಗೆಲ್ಲುವ ತಂಡ ಮೇ 29ರಂದು ನಡೆಯಲಿರುವ ಎರಡನೇ ಕ್ವಾಲಿಫಯರ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಸೆಣಸಾಟ ನಡೆಸಲಿದ್ದು, ಸೋಲುವ ತಂಡ ಟೂರ್ನಿಯಿಂದ ಎಲಿಮಿನೇಟ್ ಆಗಲಿದೆ.
ಸನ್ ರೈಸರ್ಸ್ ಹೈದರಾಬಾದ್ ಇನ್ನಿಂಗ್ಸ್: ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ಈಶಾನ್ ಕಿಶನ್ (ವಿಕೆಟ್ ಕೀಪರ್), ಹೈನ್ರಿಚ್ ಕ್ಲಾಸೆನ್, ಸ್ಮರಣ್ ರವಿಚಂದ್ರನ್, ನಿತೀಶ್ ಕುಮಾರ್ ರೆಡ್ಡಿ, ಪ್ಯಾಟ್ ಕಮ್ಮಿನ್ಸ್ (ನಾಯಕ), ಶಿವಾಂಗ್ ಕುಮಾರ್, ಈಶಾನ್ ಮಲಿಂಗಾ, ಸಾಕಿಬ್ ಹುಸೈನ್, ಪ್ರಫುಲ್ ಹಿಂಗೆ
ರಾಜಸ್ಥಾನ್ ರಾಯಲ್ಸ್ ಇನ್ನಿಂಗ್ಸ್: ಯಶಸ್ವಿ ಜೈಸ್ವಾಲ್, ವೈಭವ್ ಸೂರ್ಯವಂಶಿ, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರಿಯಾನ್ ಪರಾಗ್ (ನಾಯಕ), ಡೊನೋವನ್ ಫೆರೀರಾ, ದಸುನ್ ಶಾನಕಾ, ರವೀಂದ್ರ ಜಾಡೇಜಾ, ಜೋಫ್ರಾ ಆರ್ಚರ್, ನಾಂದ್ರೆ ಬರ್ಗರ್, ಬೃಜೇಶ್ ಶರ್ಮಾ, ಯಶ್ ರಾಜ್ ಪುಂಜಾ

