HomeIPL 2026IPL 2026: ಡೆಲ್ಲಿ ವಿರುದ್ಧ ಕೇವಲ 39 ಎಸೆತಗಳಲ್ಲಿ ಚೇಸ್ ಮಾಡಿ ಗೆದ್ದ ಆರ್‌ಸಿಬಿ; ಇದಕ್ಕಿಂತ...

IPL 2026: ಡೆಲ್ಲಿ ವಿರುದ್ಧ ಕೇವಲ 39 ಎಸೆತಗಳಲ್ಲಿ ಚೇಸ್ ಮಾಡಿ ಗೆದ್ದ ಆರ್‌ಸಿಬಿ; ಇದಕ್ಕಿಂತ ಕಡಿಮೆ ಎಸೆತಗಳಲ್ಲಿ ಗೆದ್ದ ದಾಖಲೆ ಮಾಡಿದೆ ಆ ತಂಡ!

ನಿನ್ನೆ ( ಏಪ್ರಿಲ್ 27 ) ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026ರ ಲೀಗ್ ಹಂತದ 39ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು 9 ವಿಕೆಟ್‌ಗಳ ಅಬ್ಬರದ ಗೆಲುವನ್ನು ದಾಖಲಿಸಿತು.

ಪಂದ್ಯದಲ್ಲಿ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಟಿದಾರ್ ಬೌಲಿಂಗ್ ಆರಿಸಿಕೊಂಡು ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಡೆಲ್ಲಿ ಕ್ಯಾಪಿಟಲ್ಸ್ ಆರ್‌ಸಿಬಿ ಬೌಲಿಂಗ್ ದಾಳಿಗೆ ತತ್ತರಿಸಿ 16.3 ಓವರ್‌ಗಳಲ್ಲಿ 75 ರನ್‌ಗೆ ಆಲ್‌ಔಟ್ ಆಗಿ ಆರ್‌ಸಿಬಿಗೆ 76 ರನ್‌ಗಳ ಗುರಿ ನೀಡಿತು. ಈ ಗುರಿಯನ್ನು ಬೆನ್ನಟ್ಟಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು 6.3 ಓವರ್‌ಗಳಲ್ಲಿ ಕೇವಲ 1 ವಿಕೆಟ್ ನಷ್ಟಕ್ಕೆ 77 ರನ್ ಬಾರಿಸಿತು.

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಬ್ಯಾಟ್ಸ್‌ಮನ್‌ಗಳ ಮೇಲೆ ಸವಾರಿ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬೌಲರ್ಸ್ ಅವರನ್ನು ಕಡಿಮೆ ಮೊತ್ತಕ್ಕೆ ಕಟ್ಟಿಹಾಕಿದರೆ, ಇತ್ತ ಬ್ಯಾಟ್ಸ್‌ಮನ್‌ಗಳು ಕೇವಲ 39 ಎಸೆತಗಳಲ್ಲಿ ಡೆಲ್ಲಿ ನೀಡಿದ್ದ ಗುರಿಯನ್ನು ಬೆನ್ನಟ್ಟಿ ಐಪಿಎಲ್ ಇತಿಹಾಸದಲ್ಲಿ ಎರಡನೇ ಅತಿ ವೇಗದ ಚೇಸ್ ದಾಖಲೆಯನ್ನು ಬರೆಯಿತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೌದು, ಆರ್‌ಸಿಬಿ 39 ಎಸೆತಗಳಲ್ಲಿ ಚೇಸ್ ಮಾಡಿದ್ದು, ಇದಕ್ಕೂ ಮುನ್ನ ಮುಂಬೈ ಇಂಡಿಯನ್ಸ್ 36 ಎಸೆತಗಳಲ್ಲೇ ಗುರಿಯನ್ನು ಬೆನ್ನಟ್ಟಿ ಐಪಿಎಲ್ ಇತಿಹಾಸದಲ್ಲಿ ಅತಿವೇಗದ ಚೇಸ್ ಮಾಡಿದ ದಾಖಲೆಯನ್ನು ತನ್ನ ಹೆಸರಿನಲ್ಲಿ ಹೊಂದಿದೆ.

2008ರ ಐಪಿಎಲ್ ಟೂರ್ನಿಯ 38ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಕೊಲ್ಕತ್ತಾ ನೈಟ್ ರೈಡರ್ಸ್ 15.2 ಓವರ್‌ಗಳಲ್ಲಿ 67 ರನ್‌ಗಳಿಗೆ ಆಲ್‌ಔಟ ಆಗಿ ಮುಂಬೈ ಇಂಡಿಯನ್ಸ್ ತಂಡಕ್ಕೆ 68 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ಕೇವಲ 5.3 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 68 ರನ್ ಬಾರಿಸಿತ್ತು.

ಮುಂಬೈ ಇಂಡಿಯನ್ಸ್ ಪರ ಸನತ್ ಜಯಸೂರ್ಯ 17 ಎಸೆತಗಳಲ್ಲಿ 6 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ ಅಜೇಯ 48 ರನ್ ಚಚ್ಚಿ ಈ ವೇಗದ ಚೇಸ್ ಮಾಡಲು ಪ್ರಮುಖ ಕಾರಣರಾಗಿದ್ದರು.

For Latest News Updates, Join Our Whatsapp Community🚩
Srinivasa A Kollegala
Srinivasa A Kollegala
Srinivasa A has over 6 years of experience in journalism. He has worked as a Social Media Executive at OneIndia, Sub-Editor at MyKhel and Filmibeat Kannada, and led the digital team at Andolana newspaper as Digital Head.
RELATED ARTICLES

LEAVE A REPLY

Please enter your comment!
Please enter your name here

Most Popular