HomeIPL 2026IPL 2026 Final: ಆರ್‌ಸಿಬಿಗೆ 2ನೇ ಕಪ್ ಲೋಡಿಂಗ್; ಕೇವಲ 22 ರನ್‌ಗೆ ಗಂಟುಮೂಟೆ ಕಟ್ಟಿದ...

IPL 2026 Final: ಆರ್‌ಸಿಬಿಗೆ 2ನೇ ಕಪ್ ಲೋಡಿಂಗ್; ಕೇವಲ 22 ರನ್‌ಗೆ ಗಂಟುಮೂಟೆ ಕಟ್ಟಿದ 67 ಎಸೆತಕ್ಕೆ 167 ರನ್ ಬಾರಿಸಿ ನಡುಕ ಹುಟ್ಟಿಸಿದ್ದ ಜೋಡಿ!

ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇಂದು ( ಮೇ 31 ) ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗಿವೆ.

ಪಂದ್ಯದಲ್ಲಿ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಗುಜರಾತ್ ಟೈಟನ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು.

ಅದರಂತೆ ಮೊದಲು ಬ್ಯಾಟಿಂಗ್ ಮಾಡಿರುವ ಗುಜರಾತ್ ಟೈಟನ್ಸ್ ಬೇಗನೆ ತನ್ನ ಆರಂಭಿಕರ ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಕೇವಲ 26 ರನ್‌ಗೆ ಮೊದಲ ಎರಡು ವಿಕೆಟ್‌ಗಳನ್ನು ಕಳೆದುಕೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಾಯಕ ಶುಬ್‌ಮನ್ ಗಿಲ್ 8 ಎಸೆತಗಳಿಗೆ 10 ರನ್ ಗಳಿಸಿದ್ದಾಗ ಜೋಶ್ ಹೇಜಲ್‌ವುಡ್ ಎಸೆತದಲ್ಲಿ ರಜತ್ ಪಟಿದಾರ್‌ಗೆ ಕ್ಯಾಚ್ ನೀಡಿ ಔಟ್ ಆದರು. ಬೆನ್ನಲ್ಲೇ ಸಾಯಿ ಸುದರ್ಶನ್ 12 ಎಸೆತಗಳಲ್ಲಿ 12 ರನ್ ಗಳಿಸಿ ಭುವನೇಶ್ವರ್ ಕುಮಾರ್ ಎಸೆತದಲ್ಲಿ ಜಿತೇಶ್ ಶರ್ಮಾಗೆ ಕ್ಯಾಚ್ ನೀಡಿದರು.

ಈ ಮೂಲಕ ಈ ಜೋಡಿ ಇಂದಿನ ಮಹತ್ವದ ಪಂದ್ಯದಲ್ಲಿ ಕೇವಲ 22 ರನ್‌ಗಳ ಜತೆಯಾಟವನ್ನಾಡಿ ನಿರಾಸೆ ಮೂಡಿಸಿದೆ. ಗುಜರಾತ್ ಟೈಟನ್ಸ್ ಈ ಇಬ್ಬರ ಮೇಲೆ ಅತಿಯಾಗಿ ಅವಲಂಬಿತವಾಗಿದ್ದು, ಕಳೆದ ಎರಡನೇ ಕ್ವಾಲಿಫಯರ್ ಪಂದ್ಯದಲ್ಲಿ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ತಂಡ ಭರ್ಜರಿ ಗೆಲುವು ಕಂಡಿದ್ದೂ ಸಹ ಈ ಜೋಡಿಯ ಶತಕದ ಜತೆಯಾಟದಿಂದಲೇ.

ಆ ಪಂದ್ಯದಲ್ಲಿ 77 ಎಸೆತಗಳಲ್ಲಿ 167 ರನ್ ಬಾರಿಸಿದ್ದ ಗಿಲ್ ಹಾಗೂ ಸಾಯಿ ಸುದರ್ಶನ್ ಜೋಡಿ ಈ ಪಂದ್ಯದಲ್ಲಿ ಕೈಕೊಟ್ಟಿದ್ದು, ಆರ್‌ಸಿಬಿ ಅಭಿಮಾನಿಗಳು ಈ ಸಲವೂ ಕಪ್ ನಮ್ದೇ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಳ್ಳಲಾರಂಭಿಸಿದ್ದಾರೆ.

For Latest News Updates, Join Our Whatsapp Community🚩
Srinivasa A Kollegala
Srinivasa A Kollegala
Srinivasa A has over 6 years of experience in journalism. He has worked as a Social Media Executive at OneIndia, Sub-Editor at MyKhel and Filmibeat Kannada, and led the digital team at Andolana newspaper as Digital Head.
RELATED ARTICLES

LEAVE A REPLY

Please enter your comment!
Please enter your name here

Most Popular