HomeIPL 2026ವಿಜ‍‍ಲ್ ಬಿಸಾಕಿ ಬಾಯಿ ಮುಚ್ಚಿಕೊಂಡು ಮನೆಗೆ ಹೋಗ್ತಾ ಇರಬೇಕು: ಚೆನ್ನೈ ಸೋಲಿಸಿ ರೊಚ್ಚಿಗೆದ್ದ ಇಶಾನ್ ಕಿಶನ್;...

ವಿಜ‍‍ಲ್ ಬಿಸಾಕಿ ಬಾಯಿ ಮುಚ್ಚಿಕೊಂಡು ಮನೆಗೆ ಹೋಗ್ತಾ ಇರಬೇಕು: ಚೆನ್ನೈ ಸೋಲಿಸಿ ರೊಚ್ಚಿಗೆದ್ದ ಇಶಾನ್ ಕಿಶನ್; ವಿಡಿಯೊ

ನಿನ್ನೆ ( ಮೇ 18 ) ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026ರ ಲೀಗ್ ಹಂತದ 63ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ 5 ವಿಕೆಟ್‌ಗಳ ಗೆಲುವನ್ನು ದಾಖಲಿಸುವ ಮೂಲಕ ಪ್ಲೇಆಫ್‌ಗೆ ಪ್ರವೇಶ ಪಡೆದುಕೊಂಡಿತು. ಜತೆಗೆ ಗುಜರಾತ್ ಟೈಟನ್ಸ್ ಸಹ ಪ್ಲೇಆಫ್ ಸುತ್ತಿಗೆ ಅರ್ಹತೆಯನ್ನು ಗಿಟ್ಟಿಸಿಕೊಂಡಿತು.

ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ಕಾರ್ತಿಕ್ ಶರ್ಮಾ ಹಾಗೂ ಡಿವಾಲ್ಡ್ ಬ್ರೆವಿಸ್ ಅಬ್ಬರದ ಬ್ಯಾಟಿಂಗ್ ನೆರವಿನಿಂದ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 180 ರನ್ ಕಲೆಹಾಕಿ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ 181 ರನ್‌ಗಳ ಸವಾಲಿನ ಗುರಿಯನ್ನು ನೀಡಿತ್ತು. ಚೇಸಿಂಗ್ ಕಠಿಣವಾದ ಚೆಪಾಕ್ ಪಿಚ್‌ನಲ್ಲಿ ಚೆನ್ನೈ ನೀಡಿದ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿದ ಸನ್ ರೈಸರ್ಸ್ ಹೈದರಾಬಾದ್ ಇಶಾನ್ ಕಿಶನ್ ಹಾಗೂ ಹೆನ್ರಿಕ್ ಕ್ಲಾಸೆನ್ ಅಬ್ಬರದ ಬ್ಯಾಟಿಂಗ್ ನೆರವಿನಿಂದ 19 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 181 ರನ್ ಬಾರಿಸಿತು.

ಚೆನ್ನೈ ಸೂಪರ್ ಕಿಂಗ್ಸ್ ತಂಡ ನೀಡಿದ ಗುರಿ ಚೆಪಾಕ್‌ನಂತಹ ಬೌಲಿಂಗ್ ಪಿಚ್‌ನಲ್ಲಿ ಚೇಸ್ ಮಾಡುವುದು ಸುಲಭವಾಗಿರಲಿಲ್ಲ. ಸನ್ ರೈಸರ್ಸ್ ಆರಂಭಿಕರು ಬೇಗನೆ ವಿಕೆಟ್ ಒಪ್ಪಿಸಿದ್ದು ಇದಕ್ಕೆ ಸಾಕ್ಷಿಯಾಗಿತ್ತು. ಆದರೆ ನಂತರ ಒಂದಾದ ಇಶಾನ್ ಕಿಶನ್ ಹಾಗೂ ಹೆನ್ರಿಕ್ ಕ್ಲಾಸೆನ್ ಜೋಡಿ 41 ಎಸೆತಗಳಲ್ಲಿ 75 ರನ್‌ಗಳ ಜತೆಯಾಟವನ್ನಾಡುವ ಮೂಲಕ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ಅದರಲ್ಲೂ ಕ್ಲಾಸೆನ್ ಔಟ್ ಆದರೂ ನೆಲಕಚ್ಚಿ ನಿಂತ ಇಶಾನ್ ಕಿಶನ್ 47 ಎಸೆತಗಳಲ್ಲಿ 7 ಬೌಂಡರಿ ಹಾಗೂ 3 ಸಿಕ್ಸರ್‌ ಸಹಿತ 70 ರನ್ ಚಚ್ಚಿ ತಂಡದ ಗೆಲುವಿಗೆ ಪ್ರಮುಖ ಕಾರಣನಾಗಿ ಪಂದ್ಯಶ್ರೇಷ್ಠ ಪ್ರಶಸ್ತಿಗೂ ಸಹ ಭಾಜನರಾದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೀಗೆ ಪಂದ್ಯದಲ್ಲಿ ಹೀರೊ ಆಗಿ ಮಿಂಚಿದ ಇಶಾನ್ ಕಿಶನ್ ಗೆಲುವು ಕಾಣುತ್ತಿದ್ದಂತೆ ಮೈದಾನದಲ್ಲಿ ಶಿಳ್ಳೆ ಹೊಡೆದು ಸಂಭ್ರಮಿಸಿದರು. ಅಲ್ಲದೇ ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಿಗೆ ಶಿಳ್ಳೆ ಬಿಸಾಕಿ ಮನೆಗೆ ಹೋಗಿ ವಿಜಲ್ ಹೊಡೆಯಿರಿ, ಇಲ್ಲಿಂದ ಜಾಗ ಖಾಲಿ ಮಾಡಿ ಎಂದು ಕೈ ಸನ್ನೆ ಮಾಡಿ ರೊಚ್ಚಿಗೆದ್ದರು. ಈ ವಿಡಿಯೊ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇಶಾನ್ ಕಿಶನ್ ಈ ಮಟ್ಟಕ್ಕೆ ರೊಚ್ಚಿಗೆದ್ದದ್ದು ಏಕೆ ಎಂಬ ಪ್ರಶ್ನೆ ಮೂಡಿದೆ.

For Latest News Updates, Join Our Whatsapp Community🚩
Srinivasa A Kollegala
Srinivasa A Kollegala
Srinivasa A has over 6 years of experience in journalism. He has worked as a Social Media Executive at OneIndia, Sub-Editor at MyKhel and Filmibeat Kannada, and led the digital team at Andolana newspaper as Digital Head.
RELATED ARTICLES

LEAVE A REPLY

Please enter your comment!
Please enter your name here

Most Popular