HomeLatest Newsರಾಜಸ್ಥಾನ್ ಎದುರು ಹೀನಾಯವಾಗಿ ಸೋತು ಐಪಿಎಲ್‌ನಿಂದ ಹೊರಬಿದ್ದ ಸನ್‌ರೈಸರ್ಸ್: ಗಳಗಳನೆ ಕಣ್ಣೀರಿಟ್ಟ ಕಾವ್ಯ ಮಾರನ್; ವಿಡಿಯೊ

ರಾಜಸ್ಥಾನ್ ಎದುರು ಹೀನಾಯವಾಗಿ ಸೋತು ಐಪಿಎಲ್‌ನಿಂದ ಹೊರಬಿದ್ದ ಸನ್‌ರೈಸರ್ಸ್: ಗಳಗಳನೆ ಕಣ್ಣೀರಿಟ್ಟ ಕಾವ್ಯ ಮಾರನ್; ವಿಡಿಯೊ

ನಿನ್ನೆ ( ಮೇ 27 ) ನ್ಯೂ ಚಂಡೀಗಢ್‌ನ ಮುಲ್ಲಾನ್‌ಪುರ್‌ನ ಮಹಾರಾಜ ಯದವೀಂದ್ರ ಸಿಂಗ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026ರ ಎಲಿಮಿನೇಟರ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ರಾಜಸ್ಥಾನ್ ರಾಯಲ್ಸ್ 47 ರನ್‌ಗಳ ಗೆಲುವನ್ನು ದಾಖಲಿಸುವ ಮೂಲಕ ಕ್ವಾಲಿಫಯರ್ 2ಗೆ ಎಂಟ್ರಿ ಕೊಟ್ಟಿದ್ದು, ಸೋತ ಹೈದರಾಬಾದ್ ಟೂರ್ನಿಯಿಂದ ಎಲಿಮಿನೇಟ್ ಆಯಿತು.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ ವೈಭವ್ ಸೂರ್ಯವಂಶಿ ಹಾಗೂ ಧ್ರುವ್ ಜುರೆಲ್ ಅಬ್ಬರದ ಆಟದ ನೆರವಿನಿಂದ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 243 ರನ್ ಕಲೆಹಾಕಿ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ 244 ರನ್‌ಗಳ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ಸನ್‌ರೈಸರ್ಸ್ ಹೈದರಾಬಾದ್ 19.2 ಓವರ್‌ಗಳಲ್ಲಿ 196 ರನ್‌ಗಳಿಗೆ ಆಲ್‌ಔಟ್ ಆಯಿತು.

ಇನ್ನು ಈ ಪಂದ್ಯ ಆರಂಭವಾಗುವುದಕ್ಕೂ ಮುನ್ನ ಕ್ರಿಕೆಟ್ ಪ್ರೇಮಿಗಳ ಪೈಕಿ ಬಹುತೇಕರು ಸನ್ ರೈಸರ್ಸ್ ಹೈದರಾಬಾದ್ ಗೆಲ್ಲಲಿದೆ ಎಂದೇ ಊಹಿಸಿದ್ದರು. ಆದರೆ ಪಂದ್ಯ ಆರಂಭವಾದಾಗಿನಿಂದ ಪಂದ್ಯದ ಮೇಲೆ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡರ ಮೇಲೂ ಹಿಡಿತ ಸಾಧಿಸಿದ ರಾಜಸ್ಥಾನ್ ರಾಯಲ್ಸ್ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎಲ್ಲ ವಿಭಾಗದಲ್ಲೂ ಹಿಂದಿಕ್ಕಿತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸನ್ ರೈಸರ್ಸ್ ಹೈದರಾಬಾದ್ ಡೆತ್ ಓವರ್‌ಗಳಲ್ಲಿ ವಿಕೆಟ್ ಪಡೆದು ಕಮ್‌ಬ್ಯಾಕ್ ಮಾಡುವ ಯತ್ನ ಮಾಡಿತಾದರೂ ಚೇಸಿಂಗ್‌ನಲ್ಲಿ ಮತ್ತೆ ಎಡವಿತು. ಹೀಗೆ ಪಂದ್ಯ ಆರಂಭಕ್ಕೂ ಮುನ್ನ ಗೆಲ್ಲುವ ಫೇವರಿಟ್ ತಂಡವಾಗಿದ್ದ ಸನ್ ರೈಸರ್ಸ್ ಹೈದರಾಬಾದ್ ಪಂದ್ಯ ಆರಂಭವಾದ ಕೆಲವೇ ಹೊತ್ತಲ್ಲಿ ಹಿಡಿತ ಕಳೆದುಕೊಂಡು ಕೊನೆಗೆ ಎಲಿಮಿನೇಟ್ ಆಗಿ ಟೂರ್ನಿಯಿಂದ ಹೊರಬಿದ್ದದ್ದು ಸನ್ ರೈಸರ್ಸ್ ಅಭಿಮಾನಿಗಳಲ್ಲಿ ಬೇಸರ ತಂದರೆ, ತಂಡದ ಓವರ್ ಕಾವ್ಯ ಮಾರನ್ ತಮ್ಮ ತಂಡದ ಪರಿಸ್ಥಿತಿ ಕಂಡು ಕ್ರೀಡಾಂಗಣದಲ್ಲೇ ಕಣ್ಣೀರು ಹಾಕಿದರು.

ತಂಡ ಸೋಲುತ್ತಿದ್ದಂತೆ ಕಾವ್ಯ ಮಾರನ್ ಕಣ್ಣೀರು ಒರೆಸಿಕೊಳ್ಳುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

For Latest News Updates, Join Our Whatsapp Community🚩
Srinivasa A Kollegala
Srinivasa A Kollegala
Srinivasa A has over 6 years of experience in journalism. He has worked as a Social Media Executive at OneIndia, Sub-Editor at MyKhel and Filmibeat Kannada, and led the digital team at Andolana newspaper as Digital Head.
RELATED ARTICLES

LEAVE A REPLY

Please enter your comment!
Please enter your name here

Most Popular