ಇಂದು ( ಏಪ್ರಿಲ್ 17 ) ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 2026ರ ಲೀಗ್ ಹಂತದ 25ನೇ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿಯಾಗಿವೆ.
ಪಂದ್ಯದಲ್ಲಿ ಟಾಸ್ ಗೆದ್ದಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ನಾಯಕ ಅಜಿಂಕ್ಯ ರಹಾನೆ ಬ್ಯಾಟಿಂಗ್ ಆರಿಸಿಕೊಂಡಿದ್ದಾರೆ.
ಟೂರ್ನಿಯಲ್ಲಿ ಇಲ್ಲಿಯವರೆಗೂ ಐದು ಪಂದ್ಯಗಳನ್ನಾಡಿ ನಾಲ್ಕರಲ್ಲಿ ಸೋತಿರುವ ಕೆಕೆಆರ್ ಒಂದು ಪಂದ್ಯ ಮಳೆಯಿಂದ ರದ್ದಾದ ಕಾರಣ ಇನ್ನೂ ಗೆಲುವಿನ ಖಾತೆ ತೆರೆಯಬೇಕಿದೆ. ಕೆಕೆಆರ್ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಹೀಗಾಗಿ ಭಾರೀ ಒತ್ತಡಕ್ಕೆ ಸಿಲುಕಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಈ ಪಂದ್ಯ ಬಹು ಮುಖ್ಯದ್ದಾಗಿದೆ. ಕೆಕೆಆರ್ ಆಡುವ ಬಳಗದಲ್ಲಿ ಒಂದು ಪ್ರಮುಖ ಬದಲಾವಣೆಯಾಗಿದ್ದು, ಫಿನ್ ಅಲೆನ್ ಬದಲಾಗಿ ಟಿಮ್ ಸೈಫರ್ಟ್ ತಂಡ ಸೇರಿದ್ದಾರೆ.
ಇನ್ನು ಗುಜರಾತ್ ಟೈಟನ್ಸ್ ಟೂರ್ನಿಯಲ್ಲಿ ಆಡಿರುವ ನಾಲ್ಕು ಪಂದ್ಯಗಳ ಪೈಕಿ ಎರಡರಲ್ಲಿ ಗೆದ್ದು ಇನ್ನೆರಡು ಪಂದ್ಯಗಳಲ್ಲಿ ಸೋಲನ್ನು ಕಂಡು ನಾಲ್ಕು ಅಂಕಗಳೊಂದಿಗೆ ಆರನೇ ಸ್ಥಾನದಲ್ಲಿದೆ.
ಕೊಲ್ಕತ್ತಾ ನೈಟ್ ರೈಡರ್ಸ್ ಆಡುವ ಬಳಗ: ಟಿಮ್ ಸೈಫರ್ಟ್, ಸುನೀಲ್ ನರೈನ್, ಅಜಿಂಕ್ಯ ರಹಾನೆ(ನಾಯಕ), ಕ್ಯಾಮರೂನ್ ಗ್ರೀನ್, ಅಂಕ್ರಿಷ್ ರಘುವಂಶಿ(ವಿಕೆಟ್ ಕೀಪರ್), ರೋವ್‌ಮನ್ ಪೌವೆಲ್, ರಿಂಕು ಸಿಂಗ್, ರಾಮಾನಂದ್ ಸಿಂಗ್, ಅನುಕೂಲ್ ರಾಯ್, ವೈಭವ್ ಅರೋರಾ, ಕಾರ್ತಿಕ್ ತ್ಯಾಗಿ
ಗುಜರಾತ್ ಟೈಟನ್ಸ್ ಆಡುವ ಬಳಗ: ಶುಭಮನ್ ಗಿಲ್(ನಾಯಕ), ಸಾಯಿ ಸುಧರ್ಸನ್, ಜೋಸ್ ಬಟ್ಲರ್(ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಗ್ಲೆನ್ ಫಿಲಿಪ್ಸ್, ರಾಹುಲ್ ತೇವತಿಯಾ, ರಶೀದ್ ಖಾನ್, ಅಶೋಕ್ ಶರ್ಮಾ, ಕಗಿಸೋ ರಬಾಡ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ

