ಕೊಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯುತ್ತಿರುವ ಐಪಿಎಲ್ 2026ರ ಲೀಗ್ ಹಂತದ 15ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿವೆ.
ಪಂದ್ಯದಲ್ಲಿ ಟಾಸ್ ಗೆದ್ದಿರುವ ಲಕ್ನೋ ಸೂಪರ್ ಜೈಂಟ್ಸ್ ನಾಯಕ ರಿಷಬ್ ಪಂತ್ ಬೌಲಿಂಗ್ ಆರಿಸಿಕೊಂಡು ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದಾರೆ.
ಉಭಯ ತಂಡಗಳು ಟೂರ್ನಿಯಲ್ಲಿ ಇಲ್ಲಿಯವರೆಗೂ ಆಡಿರುವ ಪಂದ್ಯಗಳಲ್ಲಿ ಉತ್ತಮ ಆಟವನ್ನೇನೂ ಆಡದೇ ಇದ್ದು, ಅಂಕಪಟ್ಟಿಯಲ್ಲಿ ಕೆಳ ಹಂತದಲ್ಲಿವೆ. ಲಕ್ನೋ ಸೂಪರ್ ಜೈಂಟ್ಸ್ ಎರಡು ಪಂದ್ಯಗಳನ್ನಾಡಿ ಒಂದು ಪಂದ್ಯದಲ್ಲಿ ಗೆದ್ದು, ಮತ್ತೊಂದು ಪಂದ್ಯದಲ್ಲಿ ಸೋಲನ್ನು ಕಂಡು ಎರಡು ಅಂಕಗಳೊಂದಿಗೆ ಏಳನೇ ಸ್ಥಾನದಲ್ಲಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ಮೂರು ಪಂದ್ಯಗಳನ್ನಾಡಿ ಎರಡರಲ್ಲಿ ಸೋತಿದ್ದು, ಮತ್ತೊಂದು ಪಂದ್ಯ ಫಲಿತಾಂಶ ಬಾರದ ಕಾರಣ ಒಂದು ಅಂಕದೊಂದಿಗೆ ಒಂಬತ್ತನೇ ಸ್ಥಾನದಲ್ಲಿದೆ. ಹೀಗಾಗಿ ಈ ಪಂದ್ಯ ಎರಡೂ ತಂಡಗಳಿಗೆ ಮುಖ್ಯದ್ದಾಗಿದೆ.
ಕೊಲ್ಕತ್ತಾ ನೈಟ್ ರೈಡರ್ಸ್ ಆಡುವ ಬಳಗ: ಅಜಿಂಕ್ಯ ರಹಾಣೆ (ನಾಯಕ), ಫಿನ್ ಆಲೆನ್, ಕ್ಯಾಮರೂನ್ ಗ್ರೀನ್, ಅಂಕ್ರಿಶ್ ರಘುವಂಶಿ (ವಿಕೆಟ್ ಕೀಪರ್), ರಿಂಕು ಸಿಂಗ್, ರೊವ್ಮನ್ ಪೊವೆಲ್, ರಾಮಾಂದೀಪ್ ಸಿಂಗ್, ಅನುಕುಲ್ ರಾಯ್, ಸುನೀಲ್ ನರೈನ್, ನವದೀಪ್ ಸೈನಿ, ಕಾರ್ತಿಕ್ ತ್ಯಾಗಿ
ಲಕ್ನೋ ಸೂಪರ್ ಜೈಂಟ್ಸ್ ಆಡುವ ಬಳಗ: ಮಿಚೆಲ್ ಮಾರ್ಷ್, ಐಡನ್ ಮಾರ್ಕ್ರಮ್, ರಿಷಭ್ ಪಂತ್ (ನಾಯಕ) (ವಿಕೆಟ್ ಕೀಪರ್), ನಿಕೋಲಸ್ ಪೂರನ್, ಅಬ್ದುಲ್ ಸಮದ್, ಮುಕುಲ್ ಚೌಧರಿ, ಮಣಿಮರನ್ ಸಿದ್ಧಾರ್ಥ್, ಅವೇಶ್ ಖಾನ್, ಮೊಹಮ್ಮದ್ ಶಮಿ, ದಿಗ್ವೇಶ್ ಸಿಂಗ್ ರಾಠಿ, ಪ್ರಿನ್ಸ್ ಯಾದವ್

