ಲಕ್ನೋದ ಏಕನ ಕ್ರೀಡಾಂಗಣದಲ್ಲಿಂದು ( ಮೇ 7 ) ಐಪಿಎಲ್ 2026ರ ಲೀಗ್ ಹಂತದ 50ನೇ ಪಂದ್ಯ ನಡೆಯುತ್ತಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿವೆ.
ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಮಳೆಯಿಂದಾಗಿ ಎರಡು ಬಾರಿ ನಿಂತು ನಡೆದ ಪಂದ್ಯದಲ್ಲಿ ಒಂದು ಓವರ್ ಕಡಿತಗೊಂಡು 19 ಓವರ್ಗಳ ಪಂದ್ಯ ನಡೆದಿದ್ದು, ಲಕ್ನೋ ಸೂಪರ್ ಜೈಂಟ್ಸ್ 3 ವಿಕೆಟ್ ನಷ್ಟಕ್ಕೆ 209 ರನ್ ಬಾರಿಸಿ ಆರ್ಸಿಬಿಗೆ 210 ರನ್ಗಳ ಕಠಿಣ ಗುರಿಯನ್ನು ನೀಡಿದೆ.
ಲಕ್ನೋ ಸೂಪರ್ ಜೈಂಟ್ಸ್ ಪರ ಆರಂಭಿಕ ಆಟಗಾರನಾಗಿ ಕಣಕ್ಕಿಳಿದ ಮಿಚೆಲ್ ಮಾರ್ಷ್ 56 ಎಸೆತಗಳಲ್ಲಿ 9 ಬೌಂಡರಿ ಹಾಗೂ 9 ಸಿಕ್ಸರ್ ಸಹಿತ 111 ರನ್ ಚಚ್ಚಿದರು. ಇನ್ನುಳಿದಂತೆ ಅರ್ಶಿನ್ ಕುಲ್ಕರ್ಣಿ 17, ನಿಕೋಲಸ್ ಪೂರನ್ 38, ಏಡನ್ ಮಾರ್ಕ್ರಮ್ ಅಜೇಯ 1 ರನ್ ಗಳಿಸಿದರು. ಅಂತಿಮ ಹಂತದಲ್ಲಿ ಅಬ್ಬರಿಸಿದ ನಾಯಕ ರಿಷಬ್ ಪಂತ್ 10 ಎಸೆತಗಳಲ್ಲಿ 4 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ ಅಜೇಯ 32 ರನ್ ಬಾರಿಸಿ ಅಬ್ಬರಿಸಿದರು.
ಆರ್ಸಿಬಿ ಪರ ಜೋಶ್ ಹೇಜಲ್ವುಡ್, ಕೃನಾಲ್ ಪಾಂಡ್ಯ ಹಾಗೂ ರಸಿಕ್ ಧರ್ ಸಲಾಮ್ ತಲಾ ಒಂದೊಂದು ವಿಕೆಟ್ ಪಡೆದರು.

