HomeIPL 2026IPL 2026: ರೋಹಿತ್, ರಿಕೆಲ್ಟನ್ ಅಬ್ಬರಕ್ಕೆ ಕೊಲ್ಕತ್ತಾ ತತ್ತರ; ಭರ್ಜರಿ ಗೆಲುವು ಸಾಧಿಸಿ ಶುಭಾರಂಭ ಮಾಡಿದ...

IPL 2026: ರೋಹಿತ್, ರಿಕೆಲ್ಟನ್ ಅಬ್ಬರಕ್ಕೆ ಕೊಲ್ಕತ್ತಾ ತತ್ತರ; ಭರ್ಜರಿ ಗೆಲುವು ಸಾಧಿಸಿ ಶುಭಾರಂಭ ಮಾಡಿದ ಮುಂಬೈ

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026ರ ಲೀಗ್ ಹಂತದ ಎರಡನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 6 ವಿಕೆಟ್‌ಗಳ ಗೆಲುವನ್ನು ದಾಖಲಿಸಿ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.

ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಬೌಲಿಂಗ್ ಆರಿಸಿಕೊಂಡು ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಅದರಂತೆ ಕೊಲ್ಕತ್ತಾ ನೈಟ್ ರೈಡರ್ಸ್ ನಾಯಕ ಅಜಿಂಕ್ಯ ರಹಾನೆ ಅರ್ಧಶತಕ, ಫಿನ್ ಅಲೆನ್ ಹಾಗೂ ಯುವ ಆಟಗಾರ ಅಂಗ್‌ಕ್ರಿಶ್ ರಘುವಂಶಿ ಅಬ್ಬರದ ಬ್ಯಾಟಿಂಗ್ ನೆರವಿನಿಂದ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 220 ರನ್ ಕಲೆಹಾಕಿ ಮುಂಬೈ ಇಂಡಿಯನ್ಸ್ ತಂಡಕ್ಕೆ 221 ರನ್‌ಗಳ ಬೃಹತ್ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ಆರಂಭಿಕರಾದ ರೋಹಿತ್ ಶರ್ಮಾ ಹಾಗೂ ರಯಾನ್ ರಿಕೆಲ್ಟನ್ ಅಬ್ಬರದ ಬ್ಯಾಟಿಂಗ್ ನೆರವಿನಿಂದ 19.1 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 224 ರನ್ ಕಲೆಹಾಕಿತು. ಈ ಮೂಲಕ ಮುಂಬೈ ಇಂಡಿಯನ್ಸ್ ಐಪಿಎಲ್ ಇತಿಹಾಸದಲ್ಲಿ ಅತಿದೊಡ್ಡ ಚೇಸ್ ಮಾಡಿದ ದಾಖಲೆ ಬರೆಯಿತು. ಅಲ್ಲದೇ 13 ವರ್ಷಗಳ ಬಳಿಕ ಟೂರ್ನಿಯಲ್ಲಿ ಮೊದಲ ಪಂದ್ಯ ಗೆದ್ದ ಸಾಧನೆ ಮಾಡಿತು.

ಕೊಲ್ಕತ್ತಾ ನೈಟ್ ರೈಡರ್ಸ್ ಇನ್ನಿಂಗ್ಸ್: ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ನಾಯಕ ಅಜಿಂಕ್ಯ ರಹಾನೆ ಹಾಗೂ ಫಿನ್ ಅಲೆನ್ ಜೋಡಿ 69 ರನ್‌ಗಳ ಉತ್ತಮ ಜತೆಯಾಟವನ್ನಾಡಿದರು. ಫಿನ್ ಅಲೆನ್ 17 ಎಸೆತಗಳಲ್ಲಿ 6 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 37 ರನ್ ಬಾರಿಸಿದರೆ, ಅಜಿಂಕ್ಯ ರಹಾನೆ 40 ಎಸೆತಗಳಲ್ಲಿ 3 ಬೌಂಡರಿ ಹಾಗೂ 6 ಸಿಕ್ಸರ್ ಸಹಿತ 67 ರನ್ ಬಾರಿಸಿದರು. ಕೆಮರಾನ್ ಗ್ರೀನ್ 18 ರನ್ ಬಾರಿಸಿದರೆ, ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಅಬ್ಬರಿಸಿದ ಅಂಗ್‌ಕ್ರಿಶ್ ರಘುವಂಶಿ 29 ಎಸೆತಗಳಲ್ಲಿ 6 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 51 ರನ್ ಬಾರಿಸಿದರು. ಇನ್ನುಳಿದಂತೆ ರಿಂಕು ಸಿಂಗ್ 21 ಎಸೆತಗಳಲ್ಲಿ ಅಜೇಯ 33 ರನ್ ಬಾರಿಸಿದರೆ, ರಮಣ್‌ದೀಪ್ ಸಿಂಗ್ ಅಜೇಯ 4 ರನ್ ಗಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಂಬೈ ಇಂಡಿಯನ್ಸ್ ಪರ ಶಾರ್ದೂಲ್ ಠಾಕೂರ್ ಟಾಪ್ 3 ಆಟಗಾರರ ವಿಕೆಟ್‌ಗಳನ್ನು ಪಡೆಯುವ ಮೂಲಕ ಕೆಕೆಆರ್‌ ಪರ ಇನ್ನಷ್ಟು ರನ್ ಹೊಳೆ ಹರಿಯುವುದನ್ನು ತಪ್ಪಿಸಿದರು ಹಾಗೂ ನಾಯಕ ಹಾರ್ದಿಕ್ ಪಾಂಡ್ಯ ಒಂದು ವಿಕೆಟ್ ಪಡೆದರು.

ಮುಂಬೈ ಇಂಡಿಯನ್ಸ್ ಇನ್ನಿಂಗ್ಸ್: ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ರೋಹಿತ್ ಶರ್ಮಾ ಹಾಗೂ ರಯಾನ್ ರಿಕೆಲ್ಟನ್ 148 ರನ್‌ಗಳ ಬೃಹತ್ ಜತೆಯಾಟವನ್ನಾಡುವ ಮೂಲಕ ಅಬ್ಬರದ ಆರಂಭ ಕಟ್ಟಿಕೊಟ್ಟರು. ರೋಹಿತ್ ಶರ್ಮಾ 38 ಎಸೆತಗಳಲ್ಲಿ 6 ಬೌಂಡರಿ ಹಾಗೂ 6 ಸಿಕ್ಸರ್ ಸಹಿತ 78 ರನ್ ಬಾರಿಸಿದರೆ, ರಯಾನ್ ರಿಕೆಲ್ಟನ್ 43 ಎಸೆತಗಳಲ್ಲಿ 4 ಬೌಂಡರಿ ಹಾಗೂ 8 ಸಿಕ್ಸರ್ ಸಹಿತ 81 ರನ್ ಚಚ್ಚಿದರು. ಇನ್ನುಳಿದಂತೆ ಸೂರ್ಯಕುಮಾರ್ ಯಾದವ್ 16, ತಿಲಕ್ ವರ್ಮಾ 20, ಹಾರ್ದಿಕ್ ಪಾಂಡ್ಯ 11 ಎಸೆತಗಳಲ್ಲಿ ಅಜೇಯ 18 ರನ್ ಹಾಗೂ ನಮನ್ ಧೀರ್ ಅಜೇಯ 5 ರನ್ ಬಾರಿಸಿದರು.

ಕೊಲ್ಕತ್ತಾ ನೈಟ್ ರೈಡರ್ಸ್ ಪರ ಕಾರ್ತಿಕ್ ತ್ಯಾಗಿ, ಸುನಿಲ್ ನರೈನ್ ಹಾಗೂ ವೈಭವ್ ಅರೋರಾ ತಲಾ ಒಂದೊಂದು ವಿಕೆಟ್ ಪಡೆದರು.

For Latest News Updates, Join Our Whatsapp Community🚩
Srinivasa A Kollegala
Srinivasa A Kollegala
Srinivasa A has over 6 years of experience in journalism. He has worked as a Social Media Executive at OneIndia, Sub-Editor at MyKhel and Filmibeat Kannada, and led the digital team at Andolana newspaper as Digital Head.
RELATED ARTICLES

LEAVE A REPLY

Please enter your comment!
Please enter your name here

Most Popular