HomeIPL 2026IPL 2026: ಒಂದೇ ಒಂದು ಗೆಲುವಿನಿಂದ ಅಂಕಪಟ್ಟಿಯಲ್ಲಿ ದೊಡ್ಡ ಜಿಗಿತ ಕಂಡ 10ನೇ ಸ್ಥಾನದಲ್ಲಿದ್ದ ಮುಂಬೈ!

IPL 2026: ಒಂದೇ ಒಂದು ಗೆಲುವಿನಿಂದ ಅಂಕಪಟ್ಟಿಯಲ್ಲಿ ದೊಡ್ಡ ಜಿಗಿತ ಕಂಡ 10ನೇ ಸ್ಥಾನದಲ್ಲಿದ್ದ ಮುಂಬೈ!

ನಿನ್ನೆ ( ಏಪ್ರಿಲ್ 20 ) ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026ರ ಲೀಗ್ ಹಂತದ 30ನೇ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ 99 ರನ್‌ಗಳ ಭರ್ಜರಿ ಗೆಲುವು ಸಾಧಿಸಿತು.

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ತಿಲಕ್ ವರ್ಮಾ ಶತಕದ ನೆರವಿನಿಂದ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 199 ರನ್ ಕಲೆಹಾಕಿ ಗುಜರಾತ್ ಟೈಟನ್ಸ್ ತಂಡಕ್ಕೆ ಗೆಲ್ಲಲು 200 ರನ್‌ಗಳ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ಗುಜರಾತ್ ಟೈಟನ್ಸ್ 15.5 ಓವರ್‌ಗಳಲ್ಲಿ ಕೇವಲ 100 ರನ್‌ಗಳಿಗೆ ಆಲ್‌ಔಟ್ ಆಯಿತು.

ಈ ಮೂಲಕ ಮುಂಬೈ ಇಂಡಿಯನ್ಸ್ ಟೂರ್ನಿಯಲ್ಲಿ ಎರಡನೇ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ ಜಿಗಿತ ಕಂಡಿದೆ. ಹೌದು. ಈ ಪಂದ್ಯ ಆರಂಭಕ್ಕೂ ಮುನ್ನ ಕೇವಲ ಎರಡು ಅಂಕಗಳೊಂದಿಗೆ ಕೊನೆಯ ಸ್ಥಾನದಲ್ಲಿದ್ದ ಮುಂಬೈ ಇಂಡಿಯನ್ಸ್ ಇದೊಂದು ದೊಡ್ಡ ಗೆಲುವಿನ ಸಹಾಯದಿಂದ ನಾಲ್ಕು ಅಂಕಗಳೊಂದಿಗೆ ಏಳನೇ ಸ್ಥಾನಕ್ಕೇರಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

-0.879 ಇದ್ದ ತಂಡದ ನೆಟ್‌ ರನ್‌ರೇಟ್ ಸದ್ಯ +0.067 ತಲುಪಿದ್ದು, ನಾಲ್ಕು ಅಂಕಗಳನ್ನು ಪಡೆದಿರುವ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳನ್ನು ಹಿಂದಿಕ್ಕಿದೆ.

For Latest News Updates, Join Our Whatsapp Community🚩
Srinivasa A Kollegala
Srinivasa A Kollegala
Srinivasa A has over 6 years of experience in journalism. He has worked as a Social Media Executive at OneIndia, Sub-Editor at MyKhel and Filmibeat Kannada, and led the digital team at Andolana newspaper as Digital Head.
RELATED ARTICLES

LEAVE A REPLY

Please enter your comment!
Please enter your name here

Most Popular