ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು ( ಏಪ್ರಿಲ್ 29 ) ಐಪಿಎಲ್ 2026ರ ಲೀಗ್ ಹಂತದ 41ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿವೆ.
ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ರಯಾನ್ ರಿಕೆಲ್ಟನ್ ಅಬ್ಬರದ ಶತಕದ ನೆರವಿನಿಂದ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 243 ರನ್ ಕಲೆಹಾಕಿ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ 244 ರನ್‌ಗಳ ಕಠಿಣ ಗುರಿಯನ್ನು ನೀಡಿದೆ.
ಮುಂಬೈ ಇಂಡಿಯನ್ಸ್ ಪರ ಆರಂಭಿಕರಾಗಿ ಕಣಕ್ಕಿಳಿದ ರಯಾನ್ ರಿಕೆಲ್ಟನ್ ಹಾಗೂ ವಿಲ್ ಜಾಕ್ಸ್ ಜೋಡಿ 93 ರನ್‌ಗಳ ಜತೆಯಾಟವನ್ನಾಡುವ ಮೂಲಕ ಉತ್ತಮ ಆರಂಭ ಕಟ್ಟಿಕೊಟ್ಟರು. ವಿಲ್ ಜಾಕ್ಸ್ 46 ರನ್‌ಗಳಿಗೆ ವಿಕೆಟ್ ಒಪ್ಪಿಸಿದರೆ, ರಯಾನ್ ರಿಕೆಲ್ಟನ್ ಕೊನೆಯ ಹಂತದವರೆಗೂ ಕಣದಲ್ಲಿದ್ದು, 55 ಎಸೆತಗಳಲ್ಲಿ 10 ಬೌಂಡರಿ ಹಾಗೂ 8 ಸಿಕ್ಸರ್ ಸಹಿತ ಅಜೇಯ 123 ರನ್ ಚಚ್ಚಿದರು. ಇನ್ನುಳಿದಂತೆ ಸೂರ್ಯಕುಮಾರ್ ಯಾದವ್ 5, ನಮನ್ ಧೀರ್ 22, ಹಾರ್ದಿಕ್ ಪಾಂಡ್ಯ 31 (15), ತಿಲಕ್ ವರ್ಮಾ 7 ರನ್ ಹಾಗೂ ರಾಬಿನ್ ಮಿನ್ಜ್ ಅಜೇಯ 1 ರನ್ ಗಳಿಸಿದರು.
ಸನ್ ರೈಸರ್ಸ್ ಹೈದರಾಬಾದ್ ಪರ ಪ್ರಫುಲ್ ಹಿಂಗೆ ಎರಡು ವಿಕೆಟ್, ಇಶಾನ್ ಮಲಿಂಗ, ಶಕಿಬ್ ಹುಸೈನ್ ಹಾಗೂ ನಿತಿಶ್ ಕುಮಾರ್ ರೆಡ್ಡಿ ತಲಾ ಒಂದೊಂದು ವಿಕೆಟ್ ಪಡೆದರು.

