ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಲೀಗ್ ಹಂತದ ಎರಡನೇ ಪಂದ್ಯ ಇಂದು ( ಮಾರ್ಚ್ 29 ) ಮುಂಬೈನ ವಾಂಖೆಡೆ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಮುಂಬೈ ಇಂಡಿಯನ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಖಾಮುಖಿಯಾಗಿವೆ.
ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಫೀಲ್ಡಿಂಗ್ ಆರಿಸಿಕೊಂಡಿದ್ದು, ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ.
ಕೊಲ್ಕತ್ತಾ ನೈಟ್ ರೈಡರ್ಸ್ ಆಡುವ ಬಳಗ: ಫಿನ್ ಅಲೆನ್, ಅಜಿಂಕ್ಯ ರಹಾಣೆ (c), ಕ್ಯಾಮರೂನ್ ಗ್ರೀನ್, ಅಂಕ್ರಿಶ್ ರಘುವಂಶಿ (w), ರಿಂಕು ಸಿಂಗ್, ರಾಮಾಂದೀಪ್ ಸಿಂಗ್, ಅನುಕುಲ್ ರಾಯ್, ಸುನಿಲ್ ನರೈನ್, ವರುಣ್ ಚಕ್ರವರ್ತಿ, ವೈಭವ್ ಅರೋರಾ, ಬ್ಲೆಸ್ಸಿಂಗ್ ಮುಜರಬಾನಿ
ಮುಂಬೈ ಇಂಡಿಯನ್ಸ್ ಆಡುವ ಬಳಗ: ರೋಹಿತ್ ಶರ್ಮಾ, ರೈನ್ ರಿಕೆಲ್ಟನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಶೆರ್ಫೇನ್ ರುದರ್‌ಫೋರ್ಡ್, ನಮನ್ ಧೀರ್, ಶಾರ್ದುಲ್ ಠಾಕೂರ್, ಮಯಾಂಕ್ ಮಾರ್ಕಂಡೆ, ಎ.ಎಂ. ಘಜನ್‌ಫರ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬುಮ್ರಾ

