ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿಂದು ( ಏಪ್ರಿಲ್ 16 ) ಐಪಿಎಲ್ 2026ರ ಲೀಗ್ ಹಂತದ 24ನೇ ಪಂದ್ಯ ನಡೆಯುತ್ತಿದ್ದು, ಮುಂಬೈ ಇಂಡಿಯನ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿವೆ.
ಪಂದ್ಯದಲ್ಲಿ ಟಾಸ್ ಗೆದ್ದಿರುವ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಐಯ್ಯರ್ ಬೌಲಿಂಗ್ ಆರಿಸಿಕೊಂಡಿದ್ದು, ಮುಂಬೈ ಇಂಡಿಯನ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದಾರೆ.
ಇನ್ನು ಕಳೆದ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಮುಂಬೈ ಇಂಡಿಯನ್ಸ್ ಆಡುವ ಬಳಗಕ್ಕೆ ಹೋಲಿಸಿದರೆ ಈ ಪಂದ್ಯದಲ್ಲಿ ಎರಡು ಪ್ರಮುಖ ಬದಲಾವಣೆಗಳಾಗಿವೆ. ಮಂಡಿರಜ್ಜು ಗಾಯಕ್ಕೊಳಗಾಗಿರುವ ರೋಹಿತ್ ಶರ್ಮಾ ಪಂದ್ಯದಿಂದ ಹೊರಬಿದ್ದಿದ್ದು, ಮಿಚೆಲ್ ಸ್ಯಾಂಟ್ನರ್ ಸಹ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.
ರೋಹಿತ್ ಶರ್ಮಾ ಬದಲಾಗಿ ಕ್ವಿಂಟನ್ ಡಿ ಕಾಕ್ ಮಿಚೆಲ್ ಸ್ಯಾಂಟ್ನರ್ ಬದಲಿಗೆ ಮಯಾಂಕ್ ರಾವತ್ ಮುಂಬೈ ಆಡುವ ಬಳಗ ಸೇರಿದ್ದಾರೆ.
ಪಂಜಾಬ್ ಕಿಂಗ್ಸ್ ಆಡುವ ಬಳಗ: ಪ್ರಭ್‌ಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್), ಪ್ರಿಯಾಂಶ್ ಆರ್ಯಾ, ಶ್ರೇಯಸ್ ಅಯ್ಯರ್ (ನಾಯಕ), ಕೂಪರ್ ಕಾನಲಿ, ಶಶಾಂಕ್ ಸಿಂಗ್, ಮಾರ್ಕಸ್ ಸ್ಟೋಯ್ನಿಸ್, ಮಾರ್ಕೋ ಜ್ಯಾನ್ಸನ್, ಜೇವಿಯರ್ ಬಾರ್ಟ್ಲೆಟ್, ವಿಜಯ್‌ಕುಮಾರ್ ವೈಶಾಖ್, ಅರ್ಶ್‌ದೀಪ್ ಸಿಂಗ್, ಯುಜ್ವೇಂದ್ರ ಚಹಲ್
ಮುಂಬೈ ಇಂಡಿಯನ್ಸ್ ಆಡುವ ಬಳಗ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರಯಾನ್ ರಿಕೆಲ್ಟನ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ನಾಯಕ), ಶೆರ್ಫೇನ್ ರುದರ್‌ಫೋರ್ಡ್, ನಮನ್ ಧೀರ್, ಮಯಾಂಕ್ ರಾವತ್, ಶಾರ್ದುಲ್ ಠಾಕೂರ್, ದೀಪಕ್ ಚಹಾರ್, ಜಸ್ಪ್ರೀತ್ ಬುಮ್ರಾ

