ಗುವಾಹಟಿಯ ಬರ್ಸಾಪರ ಕ್ರೀಡಾಂಗಣದಲ್ಲಿ ಐಪಿಎಲ್ 2026ರ ಲೀಗ್ ಹಂತದ 13ನೇ ಪಂದ್ಯ ನಡೆಯುತ್ತಿದ್ದು, 7.30ಕ್ಕೆ ಆರಂಭವಾಗಬೇಕಿದ್ದ ಪಂದ್ಯ ಮಳೆಯಿಂದಾಗಿ 10.10ಕ್ಕೆ ಶುರುವಾಗಿದೆ.
ಹೀಗಾಗಿ ಓವರ್ ಕಡಿತಗೊಂಡಿದ್ದು, 11 ಓವರ್‌ಗಳ ಪಂದ್ಯ ನಡೆಯುತ್ತಿದೆ. ಪವರ್‌ಪ್ಲೇ 3.2 ಓವರ್ ಇರಲಿದ್ದು, ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆರಿಸಿಕೊಂಡು ರಾಜಸ್ಥಾನ್ ರಾಯಲ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದಾರೆ.
ಇನ್ನು ಓರ್ವ ಬೌಲರ್‌ಗೆ 3 ಓವರ್ ಬೌಲಿಂಗ್ ಮಾಡಲು ಅವಕಾಶವಿದ್ದು, ಉಳಿದ ನಾಲ್ವರು ಬೌಲರ್‌ಗೆ ತಲಾ ಎರಡು ಓವರ್ ಬೌಲಿಂಗ್ ಮಾಡಲು ಅವಕಾಶವಿದೆ.
ಮುಂಬೈ ಇಂಡಿಯನ್ಸ್ ಆಡುವ ಬಳಗ: ರೋಹಿತ್ ಶರ್ಮಾ, ರಯಾನ್ ರಿಕೆಲ್ಟನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ನಾಯಕ), ನಮನ್ ಧೀರ್, ಶಾರ್ದುಲ್ ಠಾಕೂರ್, ದೀಪಕ್ ಚಹಾರ್, ಎ.ಎಂ. ಘಜನ್‌ಫರ್, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬುಮ್ರಾ
ರಾಜಸ್ಥಾನ್ ರಾಯಲ್ಸ್ ಆಡುವ ಬಳಗ: ವೈಭವ್ ಸೂರ್ಯವಂಶಿ, ಯಶಸ್ವಿ ಜೈಸ್ವಾಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರಿಯಾನ್ ಪರಾಗ್ (ನಾಯಕ), ಶಿಮ್ರೋನ್ ಹೆಟ್ಮೈಯರ್, ಡೊನೋವನ್ ಫೆರೀರಾ, ರವೀಂದ್ರ ಜಡೇಜಾ, ಜೋಫ್ರಾ ಆರ್ಚರ್, ನಂದ್ರೆ ಬರ್ಗರ್, ತುಷಾರ್ ದೇಶಪಾಂಡೆ, ಸಂದೀಪ್ ಶರ್ಮಾ

