HomeIPL 2026IPL 2026: ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಕುಸಿದ ಆರ್‌ಸಿಬಿ; ನಂಬರ್ 1 ಸ್ಥಾನ, ಆರೆಂಜ್ ಕ್ಯಾಪ್,...

IPL 2026: ಅಂಕಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಕುಸಿದ ಆರ್‌ಸಿಬಿ; ನಂಬರ್ 1 ಸ್ಥಾನ, ಆರೆಂಜ್ ಕ್ಯಾಪ್, ಪರ್ಪಲ್ ಕ್ಯಾಪ್ ಎಲ್ಲ ಒಂದೇ ತಂಡಕ್ಕೆ!

ನಿನ್ನೆ ( ಏಪ್ರಿಲ್ 7 ) ಗುವಾಹಟಿಯ ಬರ್ಸಾಪರ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026ರ 13ನೇ ಲೀಗ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಭರ್ಜರಿ ಗೆಲುವು ಕಂಡಿದೆ.

ಮಳೆಯಿಂದಾಗಿ ಪಂದ್ಯ ತಡವಾಗಿ ಆರಂಭಗೊಂಡ ಕಾರಣ 11 ಓವರ್‌ಗಳ ಆಟ ಆಯೋಜನೆಯಾಗಿತ್ತು. ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬೌಲಿಂಗ್ ಆರಿಸಿಕೊಂಡು ರಾಜಸ್ಥಾನ್ ರಾಯಲ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದರು. ಅದರಂತೆ ರಾಜಸ್ಥಾನ್ ರಾಯಲ್ಸ್ ಯಶಸ್ವಿ ಜೈಸ್ವಾಲ್ ಅರ್ಧಶತಕ ಹಾಗೂ ವೈಭವ್ ಸೂರ್ಯವಂಶಿ ಅಬ್ಬರದ ಬ್ಯಾಟಿಂಗ್ ನೆರವಿನಿಂದ 11 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 150 ರನ್ ಬಾರಿಸಿ ಮುಂಬೈ ಇಂಡಿಯನ್ಸ್ ತಂಡಕ್ಕೆ 151 ರನ್‌ಗಳ ಬೃಹತ್ ಗುರಿಯನ್ನು ನೀಡಿತ್ತು. ಆದರೆ ರಾಜಸ್ಥಾನ್ ರಾಯಲ್ಸ್ ಭೀಕರ ಬೌಲಿಂಗ್ ದಾಳಿಗೆ ಆರಂಭದಿಂದಲೇ ನಲುಗಿದ ಮುಂಬೈ ಇಂಡಿಯನ್ಸ್ 11 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 123 ರನ್ ಕಲೆಹಾಕಿತು. ಈ ಮೂಲಕ ರಾಜಸ್ಥಾನ್ ರಾಯಲ್ಸ್ 27 ರನ್‌ಗಳ ಜಯ ಕಂಡು ಟೂರ್ನಿಯಲ್ಲಿ ಸತತ ಮೂರನೇ ಗೆಲುವನ್ನು ಸಾಧಿಸಿತು.

ತರುವಾಯ ಅಂಕಪಟ್ಟಿಯಲ್ಲಿ 6 ಅಂಕಗಳನ್ನು ಹೊಂದಿ ಅಗ್ರಸ್ಥಾನಕ್ಕೇರಿದ್ದು, 5 ಅಂಕಗಳನ್ನು ಹೊಂದಿರುವ ಪಂಜಾಬ್ ಕಿಂಗ್ಸ್ ಎರಡನೇ ಸ್ಥಾನಕ್ಕೆ ಕುಸಿದಿದೆ ಹಾಗೂ 4 ಅಂಕಗಳನ್ನು ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೂರನೇ ಸ್ಥಾನಕ್ಕೆ ಕುಸಿದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಏರಿದ್ದು ಮಾತ್ರವಲ್ಲದೇ ರಾಜಸ್ಥಾನ್ ರಾಯಲ್ಸ್ ಆರೆಂಜ್ ಕ್ಯಾಪ್ ಹಾಗೂ ಪರ್ಪಲ್ ಕ್ಯಾಪ್‌ಗಳನ್ನೂ ಸಹ ಸದ್ಯ ತನ್ನದಾಗಿಸಿಕೊಂಡಿದೆ. ನಿನ್ನೆಯ ಪಂದ್ಯದಲ್ಲಿ 32 ಎಸೆತಗಳಲ್ಲಿ 10 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ಅಜೇಯ 77 ರನ್ ಬಾರಿಸಿದ ಯಶಸ್ವಿ ಜೈಸ್ವಾಲ್ ಟೂರ್ನಿಯಲ್ಲಿ ಒಟ್ಟು 170 ರನ್‌ಗಳನ್ನು ದಾಖಲಿಸಿ ಅತಿಹೆಚ್ಚು ರನ್ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿ ಆರೆಂಜ್ ಕ್ಯಾಪ್ ಧರಿಸಿದ್ದಾರೆ. ಇನ್ನು ಇದೇ ತಂಡದ ರವಿ ಬಿಷ್ಣೋಯಿ ಎರಡು ವಿಕೆಟ್‌ಗಳನ್ನು ಕಬಳಿಸಿ ಒಟ್ಟು 7 ವಿಕೆಟ್‌ಗಳನ್ನು ಹೊಂದುವ ಮೂಲಕ ಟೂರ್ನಿಯಲ್ಲಿ ಅತಿಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡು ಪರ್ಪಲ್ ಕ್ಯಾಪ್ ತಮ್ಮದಾಗಿಸಿಕೊಂಡಿದ್ದಾರೆ.

For Latest News Updates, Join Our Whatsapp Community🚩
Srinivasa A Kollegala
Srinivasa A Kollegala
Srinivasa A has over 6 years of experience in journalism. He has worked as a Social Media Executive at OneIndia, Sub-Editor at MyKhel and Filmibeat Kannada, and led the digital team at Andolana newspaper as Digital Head.
RELATED ARTICLES

LEAVE A REPLY

Please enter your comment!
Please enter your name here

Most Popular