HomeIPL 2026IPL 2026: ಐಪಿಎಲ್ ಅಂಕಪಟ್ಟಿಯಲ್ಲಿ ತಳ ಹಿಡಿದ 13 ಕಪ್‌ಗಳು; ಮುಂಬೈ ಸೋತಿದ್ದಕ್ಕೆ ಕುಸಿತ ಕಂಡ...

IPL 2026: ಐಪಿಎಲ್ ಅಂಕಪಟ್ಟಿಯಲ್ಲಿ ತಳ ಹಿಡಿದ 13 ಕಪ್‌ಗಳು; ಮುಂಬೈ ಸೋತಿದ್ದಕ್ಕೆ ಕುಸಿತ ಕಂಡ ಆರ್‌ಸಿಬಿ

ನಿನ್ನೆ ( ಏಪ್ರಿಲ್ 16 ) ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026ರ ಲೀಗ್ ಹಂತದ 24ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ 7 ವಿಕೆಟ್‌ಗಳ ಭರ್ಜರಿ ಗೆಲುವನ್ನು ದಾಖಲಿಸಿತು.

ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಐಯ್ಯರ್ ಬೌಲಿಂಗ್ ಆರಿಸಿಕೊಂಡು, ಮುಂಬೈ ಇಂಡಿಯನ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಅದರಂತೆ ಮುಂಬೈ ಇಂಡಿಯನ್ಸ್ ಕ್ವಿಂಟನ್ ಡಿ ಕಾಕ್ ಅಬ್ಬರದ ಶತಕದ ನೆರವಿನಿಂದ 20 ಓರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 195 ರನ್ ಕಲೆಹಾಕಿ ಪಂಜಾಬ್ ಕಿಂಗ್ಸ್‌ಗೆ 196 ರನ್‌ಗಳ ಸವಾಲಿನ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ ಪ್ರಭ್‌ಸಿಮ್ರನ್ ಸಿಂಗ್ ಹಾಗೂ ನಾಯಕ ಶ್ರೇಯಸ್ ಐಯ್ಯರ್ ಅಬ್ಬರದ ಜತೆಯಾಟದ ನೆರವಿನಿಂದ 16.3 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 198 ರನ್ ದಾಖಲಿಸಿತು.

ಈ ಪಂದ್ಯದ ಫಲಿತಾಂಶ ಅಂಕಪಟ್ಟಿಯಲ್ಲಿ ಬದಲಾವಣೆಯನ್ನು ತಂದಿದ್ದು, ಟೂರ್ನಿಯಲ್ಲಿ ಇಲ್ಲಿಯವರೆಗೂ ಐದು ಪಂದ್ಯಗಳನ್ನಾಡಿ ನಾಲ್ಕರಲ್ಲಿ ಗೆದ್ದು, ಉಳಿದೊಂದು ಪಂದ್ಯ ಡ್ರಾ ಆದ ಕಾರಣ ಒಟ್ಟು 9 ಅಂಕಗಳನ್ನು ಹೊಂದಿರುವ ಸೋಲಿಲ್ಲದ ಸರದಾರ ಪಂಜಾಬ್ ಕಿಂಗ್ಸ್ ಅಗ್ರಸ್ಥಾಕ್ಕೇರಿದರೆ, ಈ ಪಂದ್ಯಕ್ಕೂ ಮುನ್ನ ಅಗ್ರಸ್ಥಾನ ಅಲಂಕರಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎರಡನೇ ಸ್ಥಾನಕ್ಕೆ ಕುಸಿದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಐಪಿಎಲ್ ಇತಿಹಾಸದಲ್ಲಿ ಅತಿಹೆಚ್ಚು ಕಪ್ ಗೆದ್ದ ತಂಡಗಳಾದ ಚೆನ್ನೈ ಸೂಪರ್ ಕಿಂಗ್ಸ್, ಮುಂಬೈ ಇಂಡಿಯನ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ಕ್ರಮವಾಗಿ ಎಂಟು, ಒಂಬತ್ತು ಹಾಗೂ ಹತ್ತನೇ ಸ್ಥಾನದಲ್ಲಿವೆ. ಇದನ್ನು ಕಂಡು ಕ್ರಿಕೆಟ್ ಪ್ರಿಯರು ಒಟ್ಟು 13 ಕಪ್‌ಗಳು ತಳ ಹಿಡಿದಿವೆ ಎಂದು ಕಾಲೆಳೆಯುತ್ತಿದ್ದಾರೆ.

For Latest News Updates, Join Our Whatsapp Community🚩
Srinivasa A Kollegala
Srinivasa A Kollegala
Srinivasa A has over 6 years of experience in journalism. He has worked as a Social Media Executive at OneIndia, Sub-Editor at MyKhel and Filmibeat Kannada, and led the digital team at Andolana newspaper as Digital Head.
RELATED ARTICLES

LEAVE A REPLY

Please enter your comment!
Please enter your name here

Most Popular