HomeIPL 2026IPL 2026: ಆರ್‌ಸಿಬಿ ಆರ್ಭಟಕ್ಕೆ ಗುಜರಾತ್ ಚಿಂದಿ ಚಿತ್ರಾನ್ನ; ಸತತ ಎರಡನೇ ಬಾರಿಗೆ ಫೈನಲ್ ಪ್ರವೇಶಿಸಿದ...

IPL 2026: ಆರ್‌ಸಿಬಿ ಆರ್ಭಟಕ್ಕೆ ಗುಜರಾತ್ ಚಿಂದಿ ಚಿತ್ರಾನ್ನ; ಸತತ ಎರಡನೇ ಬಾರಿಗೆ ಫೈನಲ್ ಪ್ರವೇಶಿಸಿದ ಬೆಂಗಳೂರು!

ಧರಂಶಾಲಾ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟನ್ಸ್ ತಂಡಗಳ ನಡುವಿನ ಐಪಿಎಲ್ 2026ರ ಒಂದನೇ ಕ್ವಾಲಿಫಯರ್ ಪಂದ್ಯದಲ್ಲಿ ಆರ್‌ಸಿಬಿ ಗುಜರಾತ್ ವಿರುದ್ಧ 92 ರನ್‌ಗಳ ಭರ್ಜರಿ ಗೆಲುವನ್ನು ದಾಖಲಿಸಿ ಫೈನಲ್ ಪಂದ್ಯಕ್ಕೆ ಪ್ರವೇಶ ಪಡೆದುಕೊಂಡಿದೆ. ಈ ಮೂಲಕ ಕಳೆದ ಬಾರಿ ಟ್ರೋಫಿ ಗೆದ್ದಿದ್ದ ಆರ್‌ಸಿಬಿ ಸತತ ಎರಡನೇ ಬಾರಿಗೆ ಫೈನಲ್‌ಗೆ ಲಗ್ಗೆ ಇಟ್ಟಿದೆ.

ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟನ್ಸ್ ಬೌಲಿಂಗ್ ಆರಿಸಿಕೊಂಡು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. ಅದರಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 254 ರನ್ ಕಲೆಹಾಕಿ ಗುಜರಾತ್ ಟೈಟನ್ಸ್‌ಗೆ 255 ರನ್‌ಗಳ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾಗಿ ಆರ್‌ಸಿಬಿ ಬೌಲಿಂಗ್ ದಾಳಿಗೆ ನಲುಗಿದ ಗುಜರಾತ್ ಟೈಟನ್ಸ್ 19.3 ಓವರ್‌ಗಳಲ್ಲಿ 162 ರನ್‌ಗಳಿಗೆ ಆಲ್‌ಔಟ್ ಆಗಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಇನ್ನಿಂಗ್ಸ್: ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ವೆಂಕಟೇಶ್ ಐಯ್ಯರ್ 7 ಎಸೆತಗಳಲ್ಲಿ 19 ರನ್ ಗಳಿಸಿದರೆ, ವಿರಾಟ್ ಕೊಹ್ಲಿ 25 ಎಸೆತಗಳಲ್ಲಿ 43 ರನ್ ಗಳಿಸಿದರು. ಇನ್ನುಳಿದಂತೆ ದೇವದತ್ ಪಡಿಕ್ಕಲ್ 19 ಎಸೆತಗಳಲ್ಲಿ 30 ರನ್ ಬಾರಿಸಿದರೆ, ನಾಲ್ಕನೇ ವಿಕೆಟ್‌ಗೆ ಜತೆಯಾದ ನಾಯಕ ರಜತ್ ಪಟಿದಾರ್ ಹಾಗೂ ಕೃನಾಲ್ ಪಾಂಡ್ಯ 95 ರನ್‌ಗಳ ಜತೆಯಾಟವನ್ನಾಡಿ ಅಬ್ಬರಿಸಿದರು. ಕೃನಾಲ್ ಪಾಂಡ್ಯ 28 ಎಸೆತಗಳಲ್ಲಿ 43 ರನ್ ಚಚ್ಚಿದರೆ, ಕೊನೆಯವರೆಗೂ ನಿಂತು ಆರ್ಭಟಿಸಿದ ಪಟಿದಾರ್ 33 ಎಸೆತಗಳಲ್ಲಿ 5 ಬೌಂಡರಿ ಹಾಗೂ 9 ಸಿಕ್ಸರ್ ಸಹಿತ ಅಜೇಯ 93 ರನ್ ಚಚ್ಚಿದರು. ಇನ್ನುಳಿದಂತೆ ಟಿಮ್ ಡೇವಿಡ್ 4 ರನ್ ಹಾಗೂ ಜಿತೇಶ್ ಶರ್ಮಾ 5 ಎಸೆತಗಳಲ್ಲಿ ಅಜೇಯ 15 ರನ್ ಗಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗುಜರಾತ್ ಟೈಟನ್ಸ್ ಪರ ಕಗಿಸೊ ರಬಾಡಾ ಹಾಗೂ ಜೇಸನ್ ಹೋಲ್ಡರ್ ತಲಾ ಎರಡು ವಿಕೆಟ್ ಪಡೆದರೆ, ಪ್ರಸಿದ್ಧ್ ಕೃಷ್ಣ ಒಂದು ವಿಕೆಟ್ ಪಡೆದರು.

ಗುಜರಾತ್ ಟೈಟನ್ಸ್ ಇನ್ನಿಂಗ್ಸ್: ತಂಡದ ಪರ ಜೋಶ್ ಬಟ್ಲರ್ ಹಾಗೂ ರಾಹುಲ್ ತೆವಾಟಿಯಾ ಬಿಟ್ಟರೆ ಇನ್ಯಾವ ಆಟಗಾರನೂ ಸಹ ಇಪ್ಪತ್ತು ರನ್ ಮುಟ್ಟಲಾರದೇ ಪರದಾಡಿ ಆರ್‌ಸಿಬಿ ಬೌಲಿಂಗ್ ದಾಳಿಗೆ ಶರಣಾದರು. ಆರಂಭಿಕರಾದ ಸಾಯಿ ಸುದರ್ಶನ್ 14 ರನ್‌ ಗಳಿಸಿದ್ದಾಗ ಹಿಟ್ ವಿಕೆಟ್ ಆದರೆ, ನಾಯಕ ಶುಬ್‌ಮನ್ ಗಿಲ್ ಕೇವಲ 2 ರನ್‌ಗೆ ಬೆನ್ನಲ್ಲೇ ವಿಕೆಟ್ ಒಪ್ಪಿಸಿದರು. ಇನ್ನುಳಿದಂತೆ ಜೋಶ್ ಬಟ್ಲರ್ 11 ಎಸೆತಗಳಲ್ಲಿ 29 ರನ್, ನಿಶಾಂತ್ ಸಿಂಧು 5, ವಾಷಿಂಗ್ಟನ್ ಸುಂದರ್ 8, ಜೇಸನ್ ಹೋಲ್ಡರ್ ಡಕ್‌ಔಟ್, ರಶೀದ್ ಖಾನ್ 8, ಕಗಿಸೊ ರಬಾಡಾ 9, ಮೊಹಮ್ಮದ್ ಸಿರಾಜ್ 5 ರನ್, ಪ್ರಸಿದ್ಧ್ ಕೃಷ್ಣ ಅಜೇಯ 6 ರನ್ ಹಾಗೂ ರಾಹುಲ್ ತೆವಾಟಿಯಾ 68 ರನ್ ಕಲೆಹಾಕಿದರು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಜೇಕಬ್ ಡಫಿ ಮೂರು ವಿಕೆಟ್, ಭುವನೇಶ್ವರ್ ಕುಮಾರ್, ರಸಿಕ್ ಸಲಾಮ್ ಧರ್ ಹಾಗೂ ಕೃನಾಲ್ ಪಾಂಡ್ಯ ತಲಾ ಎರಡು ವಿಕೆಟ್ ಮತ್ತು ಜೋಶ್ ಹೇಜಲ್‌ವುಡ್ ಒಂದು ವಿಕೆಟ್ ಪಡೆದರು.

For Latest News Updates, Join Our Whatsapp Community🚩
Srinivasa A Kollegala
Srinivasa A Kollegala
Srinivasa A has over 6 years of experience in journalism. He has worked as a Social Media Executive at OneIndia, Sub-Editor at MyKhel and Filmibeat Kannada, and led the digital team at Andolana newspaper as Digital Head.
RELATED ARTICLES

LEAVE A REPLY

Please enter your comment!
Please enter your name here

Most Popular