HomeIPL 2026IPL 2026: ಲಕ್ನೋ ಮಣಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು

IPL 2026: ಲಕ್ನೋ ಮಣಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಂದು ( ಏಪ್ರಿಲ್ 15 ) ನಡೆದ ಐಪಿಎಲ್‌ 2026ರ ಲೀಗ್ ಹಂತದ 23ನೇ ಪಂದ್ಯದಲ್ಲಿ ಲಕ್ನೋ ಸೂಪರ್‌ ಜೈಂಟ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು 5 ವಿಕೆಟ್‌ಗಳ ಗೆಲುವನ್ನು ದಾಖಲಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾಕ್ಕೇರಿದೆ.

ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ಆರ್‌ಸಿಬಿ ಬೌಲಿಂಗ್ ದಾಳಿಗೆ ತತ್ತರಿಸಿ 20 ಓವರ್‌ಗಳಲ್ಲಿ 146 ರನ್‌ಗಳಿಗೆ ಆಲ್‌ಔಟ್ ಆಗಿ 147 ರನ್‌ಗಳ ಸುಲಭ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನಟ್ಟಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು 15.1 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 149 ರನ್ ಕಲೆಹಾಕಿತು.

ಲಕ್ನೋ ಸೂಪರ್ ಜೈಂಟ್ಸ್ ಇನ್ನಿಂಗ್ಸ್: ತಂಡದ ಪರ ಆರಂಭಿಕರಾಗಿ ಮಿಚೆಲ್ ಮಾರ್ಷ್ ಹಾಗೂ ಏಡನ್ ಮಾರ್ಕ್ರಮ್ ಕಣಕ್ಕಿಳಿದರು. ಮಾರ್ಕ್ರಮ್ 12 ರನ್ ಗಳಿಸಿ ಔಟ್ ಆದರು. ಬೆನ್ನಲ್ಲೇ ಕಣಕ್ಕಿಳಿದ ರಿಷಭ್ ಪಂತ್ ರಿಟೈರ್ಡ್ ಹರ್ಟ್ ಆದರೂ ತಂಡ ಐದು ವಿಕೆಟ್ ಕಳೆದುಕೊಂಡ ಬಳಿಕ ಕಣಕ್ಕಿಳಿದು ಕೇವಲ ಒಂದು ರನ್‌ಗೆ ವಿಕೆಟ್ ಒಪ್ಪಿಸಿದರು. ನಿಕೋಲಸ್ ಪೂರನ್ ಸಹ 1 ರನ್ ಗಳಿಸಿ ವಿಫಲರಾದರೆ, ಅಬ್ದುಲ್ ಸಮದ್ ಡಕ್‌ಔಟ್ ಆದರು. ಒಂದೆಡೆ ವಿಕೆಟ್ ಬೀಳುತ್ತಿದ್ದರೆ ಮತ್ತೊಂದೆಡೆ ಕೆಲ ಕಾಲ ನೆಲಕಚ್ಚಿ ನಿಂತ ಮಾರ್ಷ್ 40 ರನ್‌, ಆಯುಷ್ ಬದೋನಿ 38, ಮುಕುಲ್ ಚೌಧರಿ 39, ಜಾರ್ಜ್ ಲಿಂಡೆ 7, ಮೊಹಮ್ಮದ್ ಶಮಿ ಡಕ್‌ಔಟ್, ಆವೇಶ್ ಖಾನ್ 1 ರನ್ ಹಾಗೂ ದಿಗ್ವೇಶ್ ರಾಠಿ ಯಾವುದೇ ರನ್ ಗಳಿಸದೇ ಅಜೇಯರಾಗಿ ಉಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ರಸಿಕ್ ಧರ್ ಸಲಾಮ್ ನಾಲ್ಕು ವಿಕೆಟ್, ಭುವನೇಶ್ವರ್ ಕುಮಾರ್ ಮೂರು ವಿಕೆಟ್, ಕೃನಾಲ್ ಪಾಂಡ್ಯ ಎರಡು ವಿಕೆಟ್ ಹಾಗೂ ಜೋಶ್ ಹೇಜಲ್‌ವುಡ್ ಒಂದು ವಿಕೆಟ್ ಪಡೆದರು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಇನ್ನಿಂಗ್ಸ್: ಲಕ್ನೋ ನೀಡಿದ ಗುರಿಯನ್ನು ಬೆನ್ನಟ್ಟಿದ ಆರ್‌ಸಿಬಿ ಪರ ಆರಂಭಿಕರಾಗಿ ಕಣಕ್ಕಿಳಿದ ಫಿಲ್ ಸಾಲ್ಟ್ 7 ರನ್ ಗಳಿಸಿದರೆ, ವಿರಾಟ್ ಕೊಹ್ಲಿ 49, ದೇವದತ್ ಪಡಿಕ್ಕಲ್ 10, ನಾಯಕ ರಜತ್ ಪಟಿದಾರ್ 27, ಜಿತೇಶ್ ಶರ್ಮಾ 23, ಟಿಮ್ ಡೇವಿಡ್ ಅಜೇಯ 14 ಹಾಗೂ ರೊಮಾರಿಯೊ ಶೆಫರ್ಡ್ ಅಜೇಯ 14 ರನ್ ಗಳಿಸಿದರು.

ಲಕ್ನೋ ಸೂಪರ್ ಜೈಂಟ್ಸ್ ಪರ ಪ್ರಿನ್ಸ್ ಯಾದವ್ ಮೂರು ವಿಕೆಟ್ ಹಾಗೂ ಆವೇಶ್ ಖಾನ್ ಎರಡು ವಿಕೆಟ್ ಪಡೆದರು.

For Latest News Updates, Join Our Whatsapp Community🚩
Srinivasa A Kollegala
Srinivasa A Kollegala
Srinivasa A has over 6 years of experience in journalism. He has worked as a Social Media Executive at OneIndia, Sub-Editor at MyKhel and Filmibeat Kannada, and led the digital team at Andolana newspaper as Digital Head.
RELATED ARTICLES

LEAVE A REPLY

Please enter your comment!
Please enter your name here

Most Popular