HomeLatest NewsIPL 2026: ಆರ್‌ಸಿಬಿ ಫ್ಯಾನ್ಸ್‌ಗೆ ಡಬಲ್ ಧಮಾಕಾ; ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಆರ್‌ಸಿಬಿ, ಆರೆಂಜ್ ಕ್ಯಾಪ್ ಪಡೆದ...

IPL 2026: ಆರ್‌ಸಿಬಿ ಫ್ಯಾನ್ಸ್‌ಗೆ ಡಬಲ್ ಧಮಾಕಾ; ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ ಆರ್‌ಸಿಬಿ, ಆರೆಂಜ್ ಕ್ಯಾಪ್ ಪಡೆದ ಕೊಹ್ಲಿ

ನಿನ್ನೆ ( ಏಪ್ರಿಲ್ 15 ) ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026ರ ಲೀಗ್ ಹಂತದ 23ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 5 ವಿಕೆಟ್‌ಗಳ ಗೆಲುವನ್ನು ದಾಖಲಿಸಿತು.

ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ಆರ್‌ಸಿಬಿ ಬೌಲಿಂಗ್ ದಾಳಿಗೆ ತತ್ತರಿಸಿ 20 ಓವರ್‌ಗಳಲ್ಲಿ 146 ರನ್‌ಗಳಿಗೆ ಆಲ್‌ಔಟ್ ಆಗಿ 147 ರನ್‌ಗಳ ಸುಲಭ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನಟ್ಟಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು 15.1 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 149 ರನ್ ಕಲೆಹಾಕಿತು.

ಈ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟೂರ್ನಿಯಲ್ಲಿ ಐದು ಪಂದ್ಯಗಳನ್ನಾಡಿ ನಾಲ್ಕರಲ್ಲಿ ಗೆದ್ದು ಒಂದರಲ್ಲಿ ಸೋಲುವ ಮೂಲಕ 8 ಅಂಕಗಳನ್ನು ಹೊಂದಿತು. ರಾಜಸ್ಥಾನ್ ರಾಯಲ್ಸ್ ತಂಡದಷ್ಟೇ ಅಂಕವಿದ್ದರೂ ಸಹ ನೆಟ್ ರನ್‌ರೇಟ್ ಹೆಚ್ಚಿರುವ ಕಾರಣ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಗ್ರಸ್ಥಾನವನ್ನು ಪಡೆದುಕೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಗ್ರಸ್ಥಾನಕ್ಕೇರಿದ ಖುಷಿ ಒಂದೆಡೆಯಾದರೆ ಮತ್ತೊಂದೆಡೆ ಟೂರ್ನಿಯಲ್ಲಿ ಅತಿಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಹೌದು, ನಿನ್ನೆಯ ಪಂದ್ಯದಲ್ಲಿ 34 ಎಸೆತಗಳಲ್ಲಿ 49 ರನ್ ಬಾರಿಸಿದ ವಿರಾಟ್ ಕೊಹ್ಲಿ ಟೂರ್ನಿಯಲ್ಲಿ ಒಟ್ಟು 5 ಪಂದ್ಯಗಳನ್ನಾಡಿ 228 ರನ್ ಗಳಿಸಿ ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.

5 ಪಂದ್ಯಗಳನ್ನಾಡಿ 224 ರನ್ ಗಳಿಸಿರುವ ಹೆನ್‌ರಿಚ್ ಕ್ಲಾಸೆನ್ ಎರಡನೇ ಸ್ಥಾನದಲ್ಲಿದ್ದಾರೆ. 5 ಪಂದ್ಯಗಳನ್ನಾಡಿ 222 ರನ್ ಗಳಿಸಿರುವ ರಜತ್ ಪಟಿದಾರ್ ಮೂರನೇ ಸ್ಥಾನದಲ್ಲಿದ್ದಾರೆ.

For Latest News Updates, Join Our Whatsapp Community🚩
Srinivasa A Kollegala
Srinivasa A Kollegala
Srinivasa A has over 6 years of experience in journalism. He has worked as a Social Media Executive at OneIndia, Sub-Editor at MyKhel and Filmibeat Kannada, and led the digital team at Andolana newspaper as Digital Head.
RELATED ARTICLES

LEAVE A REPLY

Please enter your comment!
Please enter your name here

Most Popular