HomeIPL 2026ಅಣ್ಣ ವೈಭವ್ ಎಲ್ಲರಿಗೂ ಬಾರಿಸ್ತಾನೆ, ನೀನೇ ಕಾಪಾಡಬೇಕು; ರಾಜಸ್ಥಾನ್ ಪಂದ್ಯಕ್ಕೂ ಮುನ್ನ ಭಯ ಹೊರಹಾಕಿದ ಆರ್‌ಸಿಬಿ...

ಅಣ್ಣ ವೈಭವ್ ಎಲ್ಲರಿಗೂ ಬಾರಿಸ್ತಾನೆ, ನೀನೇ ಕಾಪಾಡಬೇಕು; ರಾಜಸ್ಥಾನ್ ಪಂದ್ಯಕ್ಕೂ ಮುನ್ನ ಭಯ ಹೊರಹಾಕಿದ ಆರ್‌ಸಿಬಿ ಫ್ಯಾನ್ಸ್ !

ಇಂದು ( ಏಪ್ರಿಲ್ 10 ) ಸಂಜೆ ಗುವಾಹಟಿಯ ಬರ್ಸಾಪರ ಕ್ರೀಡಾಂಗಣ ರಾಯಲ್ಸ್‌ಗಳ ಜಿದ್ದಾಜಿದ್ದಿಗೆ ವೇದಿಕೆಯಾಗಲಿದೆ. ಟೂರ್ನಿಯಲ್ಲಿ ಇಲ್ಲಿಯವರೆಗೂ ಸೋಲನ್ನೇ ಕಂಡಿರದ ಉಭಯ ತಂಡಗಳ ಈ ಹಣಾಹಣಿ ಭಾರೀ ಕುತೂಹಲವನ್ನು ಹುಟ್ಟುಹಾಕಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಟೂರ್ನಿಯಲ್ಲಿ ಎರಡು ಪಂದ್ಯಗಳನ್ನಾಡಿ ಅಂಕಪಟ್ಟಿಯಲ್ಲಿ ನಾಲ್ಕು ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದರೆ, ರಾಜಸ್ಥಾನ ಆಡಿರುವ ಮೂರೂ ಪಂದ್ಯಗಳಲ್ಲಿ ಗೆದ್ದು ಆರು ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ದ ಭರ್ಜರಿ ಗೆಲುವು ಸಾಧಿಸಿದ್ದರೆ, ರಾಜಸ್ಥಾನ್ ರಾಯಲ್ಸ್ ಚೆನ್ನೈ ಸೂಪರ್ ಕಿಂಗ್ಸ್, ಗುಜರಾತ್ ಟೈಟನ್ಸ್ ಹಾಗೂ ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದುಬೀಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಎಲ್ಲ ಪಂದ್ಯಗಳಲ್ಲಿಯೂ ರಾಜಸ್ಥಾನ್ ರಾಯಲ್ಸ್ ಬ್ಯಾಟಿಂಗ್ ವಿಭಾಗ ಉತ್ತಮ ಪ್ರದರ್ಶನ ನೀಡಿದೆ. ಅದರಲ್ಲಿಯೂ ತಂಡದ ಆರಂಭಿಕ ಆಟಗಾರ ವೈಭವ್ ಸೂರ್ಯವಂಶಿ ಎಲ್ಲ ಪಂದ್ಯಗಳಲ್ಲೂ ಉತ್ತಮ ಆಟವನ್ನಾಡಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಹೀಗಾಗಿ ವೈಭವ್ ಸೂರ್ಯವಂಶಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ ಯಾವ ರೀತಿಯ ಪ್ರದರ್ಶನ ನೀಡಲಿದ್ದಾರೆ ಎಂಬ ಕುತೂಹಲ ಎದ್ದಿದೆ. ವೈಭವ್ ಸೂರ್ಯವಂಶಿಯ ಉತ್ತಮ ಇನ್ನಿಂಗ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೇಲೆ ಒತ್ತಡ ಹೇರಲಿದ್ದು, ಹೀಗಾಗಿ ಆತನನ್ನು ಕಡಿಮೆ ರನ್‌ಗೆ ಔಟ್ ಮಾಡಲೇಬೇಕಾದ ಅನಿವಾರ್ಯತೆ ಇದೆ.

ಇದೇ ವಿಷಯದ ಕುರಿತಾಗಿ ಸಾಮಾಜಿಕ ಜಾಲತಾಣದಲ್ಲಿ ಆರ್‌ಸಿಬಿ ಅಭಿಮಾನಿಗಳು ತಮ್ಮ ತಂಡಕ್ಕೆ ಮನವಿ ಮಾಡಿದ್ದಾರೆ. ಹೌದು, ವೈಭವ್ ಸೂರ್ಯವಂಶಿ ಆರ್‌ಸಿಬಿ ಬೌಲರ್‌ಗಳಿಗೆ ಕಂಟಕವಾಗಲಿದ್ದು, ಆತನನ್ನು ಕಟ್ಟಿಹಾಕಬಲ್ಲ ಸಾಮರ್ಥ್ಯವಿರುವ ಏಕೈಕ ಬೌಲರ್ ಎಂದರೆ ಅದು ಭುವನೇಶ್ವರ್ ಕುಮಾರ್‌ಗೆ ಮಾತ್ರ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಹಲವರು ವೈಭವ್ ಸೂರ್ಯವಂಶಿಯನ್ನು ಎದುರಿಸಲು ಭುವನೇಶ್ವರ್ ಕುಮಾರ್‌ರಿಂದ ಮಾತ್ರ ಸಾಧ್ಯ. ಆತನನ್ನು ಪೂರ್ತಿ ಪವರ್‌ಪ್ಲೇ ಆಡಲು ಬಿಡದೇ ವಿಕೆಟ್ ಪಡೆಯುವ ಸಾಮರ್ಥ್ಯವಿರುವುದು ಭುವನೇಶ್ವರ್‌ಗೆ ಮಾತ್ರ. ಹೀಗಾಗಿ ಭುವನೇಶ್ವರ್ ಅಣ್ಣ ವೈಭವ್ ತಂಡದ ಎಲ್ಲ ಬೌಲರ್‌ಗಳಿಗೂ ದೊಡ್ಡ ಹೊಡೆತಗಳನ್ನು ಬಾರಿಸುತ್ತಾನೆ, ಆತನ ವಿಕೆಟ್ ಪಡೆದು ತಂಡವನ್ನು ಕಾಪಾಡು ಎಂದು ಮನವಿ ಮಾಡಿಕೊಂಡು ಪೋಸ್ಟ್ ಹಂಚಿಕೊಂಡಿದ್ದಾರೆ.

ಕಳೆದ ವರ್ಷ ನಡೆದಿದ್ದ ಐಪಿಎಲ್ ಪಂದ್ಯದಲ್ಲಿ ಆರ್‌ಸಿಬಿ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿದ್ದಾಗ ವೈಭವ್ ಸೂರ್ಯವಂಶಿ 12 ಎಸೆತಗಳಲ್ಲಿ 16 ರನ್ ಬಾರಿಸಿ ಔಟ್ ಆಗಿದ್ದರು. ಅಷ್ಟರಲ್ಲೇ ಎರಡು ಸಿಕ್ಸರ್ ಬಾರಿಸಿ ಅಬ್ಬರಿಸಿದ್ದರು. ಭುವನೇಶ್ವರ್ ಕುಮಾರ್ ಎಸೆದ ಐದನೇ ಓವರ್‌ನ ಮೊದಲ ಎಸೆತಕ್ಕೆ ವೈಭವ್ ಭರ್ಜರಿ ಸಿಕ್ಸರ್ ಸಿಡಿಸಿದ್ದರು. ಬೆನ್ನಲ್ಲೇ ಭುವನೇಶ್ವರ್ ಕುಮಾರ್ ಕ್ಲೀನ್ ಬೌಲ್ಡ್ ಮಾಡಿ ವೈಭವ್‌ಗೆ ಪೆವಿಲಿಯನ್ ಹಾದಿ ತೋರಿಸಿದ್ದರು.

For Latest News Updates, Join Our Whatsapp Community🚩
Srinivasa A Kollegala
Srinivasa A Kollegala
Srinivasa A has over 6 years of experience in journalism. He has worked as a Social Media Executive at OneIndia, Sub-Editor at MyKhel and Filmibeat Kannada, and led the digital team at Andolana newspaper as Digital Head.
RELATED ARTICLES

LEAVE A REPLY

Please enter your comment!
Please enter your name here

Most Popular