HomeIPL 2026IPL 2026: ಸಾಲ್ಟ್ ಬಿಟ್ಟು ನಡೆಯದ ಉಳಿದವರ ಆಟ; ಡೆಲ್ಲಿಗೆ ಸವಾಲಿನ ಗುರಿ ನೀಡಿದ ಆರ್‌ಸಿಬಿ

IPL 2026: ಸಾಲ್ಟ್ ಬಿಟ್ಟು ನಡೆಯದ ಉಳಿದವರ ಆಟ; ಡೆಲ್ಲಿಗೆ ಸವಾಲಿನ ಗುರಿ ನೀಡಿದ ಆರ್‌ಸಿಬಿ

ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಲೀಗ್ ಹಂತದ 26ನೇ ಪಂದ್ಯ ಇಂದು ( ಏಪ್ರಿಲ್ 18 ) ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿವೆ.

ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫಿಲ್ ಸಾಲ್ಟ್ ಅರ್ಧಶತಕದ ನೆರವಿನಿಂದ 8 ವಿಕೆಟ್ ನಷ್ಟಕ್ಕೆ 175 ರನ್ ಕಲೆಹಾಕಿ ಡೆಲ್ಲಿ ಕ್ಯಾಪಿಟಲ್ಸ್‌ಗೆ 176 ರನ್‌ಗಳ ಗುರಿಯನ್ನು ನೀಡಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಫಿಲ್ ಸಾಲ್ಟ್ ಹೊರತುಪಡಿಸಿ ಉಳಿದ ಬ್ಯಾಟ್ಸ್‌ಮನ್‌ಗಳು ಹೇಳಿಕೊಳ್ಳುವಂತಹ ಪ್ರದರ್ಶನ ನೀಡಲಿಲ್ಲ. ಸಾಲ್ಟ್ ಹಾಗೂ ಟಿಮ್ ಡೇವಿಡ್ ಹೊರತುಪಡಿಸಿ ಉಳಿದ ಯಾವ ಆಟಗಾರನೂ ಸಹ 20 ರನ್ ದಾಟಲಿಲ್ಲ. ಸಾಲ್ಟ್ 38 ಎಸೆತಗಳಲ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 63 ರನ್ ಗಳಿಸಿದರೆ, ವಿರಾಟ್ ಕೊಹ್ಲಿ 19, ದೇವದತ್ ಪಡಿಕ್ಕಲ್ 18, ನಾಯಕ ರಜತ್ ಪಟಿದಾರ್ 8, ಟಿಮ್ ಡೇವಿಡ್ 26, ಜಿತೇಶ್ ಶರ್ಮಾ 14, ರೊಮಾರಿಯೊ ಶೆಫರ್ಡ್ ಕೇವಲ 1, ಕೃನಾಲ್ ಪಾಂಡ್ಯ 12, ಭುವನೇಶ್ವರ್ ಕುಮಾರ್ ಅಜೇಯ 3 ಹಾಗೂ ಯಾವುದೇ ರನ್ ಗಳಿಸದ ರಸಿಕ್ ಧರ್ ಅಜೇಯರಾಗಿ ಉಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡೆಲ್ಲಿ ಕ್ಯಾಪಿಟಲ್ಸ್ ಪರ ಲುಂಗಿ ಎನ್‌ಗಿಡಿ, ನಾಯಕ ಅಕ್ಷರ್ ಪಟೇಲ್ ಹಾಗೂ ಕುಲ್‌ದೀಪ್ ಯಾದವ್ ತಲಾ ಎರಡು ವಿಕೆಟ್ ಪಡೆದರೆ, ಮುಕೇಶ್ ಕುಮಾರ್ ಒಂದು ವಿಕೆಟ್ ಪಡೆದರು.

For Latest News Updates, Join Our Whatsapp Community🚩
Srinivasa A Kollegala
Srinivasa A Kollegala
Srinivasa A has over 6 years of experience in journalism. He has worked as a Social Media Executive at OneIndia, Sub-Editor at MyKhel and Filmibeat Kannada, and led the digital team at Andolana newspaper as Digital Head.
RELATED ARTICLES

LEAVE A REPLY

Please enter your comment!
Please enter your name here

Most Popular