ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026ರ ಲೀಗ್ ಹಂತದ 11ನೇ ಪಂದ್ಯ ನಡೆಯುತ್ತಿದ್ದು, ಪಂದ್ಯದಲ್ಲಿ ಬದ್ಧ ಎದುರಾಳಿಗಳಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿವೆ.
ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಬೌಲಿಂಗ್ ಆರಿಸಿಕೊಂಡಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡುವ ಬಳಗ: ಫಿಲಿಪ್ ಸಾಲ್ಟ್, ವಿರಾಟ್ ಕೊಹ್ಲಿ, ದೇವದತ್ತ್ ಪಡಿಕ್ಕಲ್, ರಜತ್ ಪಟೀದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ರೊಮಾರಿಯೋ ಶೆಪರ್ಡ್, ಕ್ರುಣಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಅಭಿನಂದನ್ ಸಿಂಗ್, ಜೇಕಬ್ ಡಫಿ
ಚೆನ್ನೈ ಸೂಪರ್ ಕಿಂಗ್ಸ್ ಆಡುವ ಬಳಗ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್ (ನಾಯಕ), ಆಯುಷ್ ಮಹತ್ರೆ, ಸರ್ಫರಾಜ್ ಖಾನ್, ಶಿವಂ ದುಬೆ, ಪ್ರಶಾಂತ್ ವೀರ್, ಜೇಮಿ ಓವರ್ಟನ್, ನೂರ್ ಅಹ್ಮದ್, ಅಂಶುಲ್ ಕಂಬೋಜ್, ಮ್ಯಾಟ್ ಹೆನ್ರಿ, ಖಲೀಲ್ ಅಹ್ಮದ್

