ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಲೀಗ್ ಹಂತದ 26ನೇ ಪಂದ್ಯ ಇಂದು ( ಏಪ್ರಿಲ್ 18 ) ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿವೆ.
ಪಂದ್ಯದಲ್ಲಿ ಟಾಸ್ ಗೆದ್ದಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಷರ್ ಪಟೇಲ್ ಬೌಲಿಂಗ್ ಆರಿಸಿಕೊಂಡಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ.
ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು ಐದು ಪಂದ್ಯಗಳನ್ನಾಡಿ ನಾಲ್ಕರಲ್ಲಿ ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎಂಟು ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದು, ನಾಲ್ಕು ಪಂದ್ಯಗಳನ್ನಾಡಿ ಎರಡರಲ್ಲಿ ಗೆದ್ದು ಎರಡರಲ್ಲಿ ಸೋತಿರುವ ಡೆಲ್ಲಿ ಕ್ಯಾಪಿಟಲ್ಸ್ ನಾಲ್ಕು ಅಂಕಗಳೊಂದಿಗೆ ಆರನೇ ಸ್ಥಾನದಲ್ಲಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡುವ ಬಳಗ: ವಿರಾಟ್ ಕೊಹ್ಲಿ, ಫಿಲಿಪ್ ಸಾಲ್ಟ್, ದೇವದತ್ತ್ ಪಡಿಕ್ಕಲ್, ರಾಜತ್ ಪಟೀದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸುಯ್ಯಾಶ್ ಶರ್ಮಾ, ಜೋಶ್ ಹೇಜಲ್‌ವುಡ್
ಡೆಲ್ಲಿ ಕ್ಯಾಪಿಟಲ್ಸ್ ಆಡುವ ಬಳಗ: ಪಥುಮ್ ನಿಸ್ಸಂಕ, ಕೆ.ಎಲ್. ರಾಹುಲ್ (ವಿಕೆಟ್ ಕೀಪರ್), ಸಮೀರ್ ರಿಜ್ವಿ, ಅಕ್ಷರ್ ಪಟೇಲ್ (ನಾಯಕ), ಡೇವಿಡ್ ಮಿಲ್ಲರ್, ಟ್ರಿಸ್ಟನ್ ಸ್ಟಬ್ಸ್, ಔಕಿಬ್ ನಬಿ ದಾರ್, ಲುಂಗಿ ನ್ಗಿಡಿ, ಕುಲದೀಪ್ ಯಾದವ್, ಟಿ. ನಟರಾಜನ್, ಮುಕೇಶ್ ಕುಮಾರ್

