HomeIPL 2026IPL 2026: ಗುಜರಾತ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಆರ್‌ಸಿಬಿ

IPL 2026: ಗುಜರಾತ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಆರ್‌ಸಿಬಿ

ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಫೈನಲ್ ಪಂದ್ಯ ಇಂದು ( ಮೇ 31 ) ಅಹ್ಮದಾಬಾದ್‌ನ ನರೇಂದ್ರ ಮೋದಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗಿವೆ.

ಪಂದ್ಯದಲ್ಲಿ ಟಾಸ್ ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬೌಲಿಂಗ್ ಆರಿಸಿಕೊಂಡಿದ್ದು, ಗುಜರಾತ್ ಟೈಟನ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ.

ಗ್ರೂಪ್ ಹಂತದಲ್ಲಿ ಟಾಪ್ ಒಂದು ಹಾಗೂ ಎರಡನೇ ಸ್ಥಾನಗಳನ್ನು ಪಡೆದುಕೊಂಡು ಒಂದನೇ ಕ್ವಾಲಿಫಯರ್ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಆರ್‌ಸಿಬಿ ಹಾಗೂ ಗುಜರಾತ್ ಟೈಟನ್ಸ್ ಮತ್ತೊಮ್ಮೆ ಮುಖಾಮುಖಿಯಾಗಿದ್ದು, ಆ ಪಂದ್ಯದ ರೀತಿಯ ಫಲಿತಾಂಶವೇ ಈ ಪಂದ್ಯದಲ್ಲಿಯೂ ಬರುತ್ತಾ ಅಥವಾ ಗುಜರಾತ್ ಟೈಟನ್ಸ್ ಆರ್‌ಸಿಬಿಯ ವಿರುದ್ಧ ಸೇಡು ತೀರಿಸಿಕೊಳ್ಳಲಿದೆಯಾ ಎಂಬ ಕುತೂಹಲ ಎದ್ದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರ್‌ಸಿಬಿ ಆಡುವ ಬಳಗ: ವಿರಾಟ್ ಕೊಹ್ಲಿ, ದೇವದತ್ತ್ ಪಡಿಕ್ಕಲ್, ರಜತ್ ಪಟೀದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ಕ್ರುನಾಲ್ ಪಾಂಡ್ಯ, ರೊಮಾರಿಯೋ ಶೆಪರ್ಡ್, ಭುವನೇಶ್ವರ್ ಕುಮಾರ್, ಜೇಕಬ್ ಡಫಿ, ಜೋಶ್ ಹ್ಯಾಜಲ್‌ವುಡ್, ರಸೀಖ್ ಸಲಾಮ್ ದಾರ್

ಗುಜರಾತ್ ಟೈಟನ್ಸ್ ಆಡುವ ಬಳಗ: ಸಾಯಿ ಸುದರ್ಶನ್, ಶುಭಮನ್ ಗಿಲ್ (ನಾಯಕ), ಜೋಸ್ ಬಟ್ಲರ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ರಾಹುಲ್ ತೆವಾಟಿಯಾ, ನಿಶಾಂತ್ ಸಿಂಧು, ಜೇಸನ್ ಹೋಲ್ಡರ್, ರಶೀದ್ ಖಾನ್, ಅರ್ಷದ್ ಖಾನ್, ಕಾಗಿಸೊ ರಬಾಡ, ಮುಹಮ್ಮದ್ ಸಿರಾಜ್

For Latest News Updates, Join Our Whatsapp Community🚩
Srinivasa A Kollegala
Srinivasa A Kollegala
Srinivasa A has over 6 years of experience in journalism. He has worked as a Social Media Executive at OneIndia, Sub-Editor at MyKhel and Filmibeat Kannada, and led the digital team at Andolana newspaper as Digital Head.
RELATED ARTICLES

LEAVE A REPLY

Please enter your comment!
Please enter your name here

Most Popular