HomeIPL 2026IPL 2026: ಆರ್‌ಸಿಬಿ vs ಮುಂಬೈ ಮಹಾ ಕಾಳಗದ ಟಾಸ್ ವರದಿ ಹಾಗೂ ಆಡುವ ಬಳಗ

IPL 2026: ಆರ್‌ಸಿಬಿ vs ಮುಂಬೈ ಮಹಾ ಕಾಳಗದ ಟಾಸ್ ವರದಿ ಹಾಗೂ ಆಡುವ ಬಳಗ

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿಂದು ( ಏಪ್ರಿಲ್ 12 ) ಐಪಿಎಲ್ 2026ರ ಲೀಗ್ ಹಂತದ 20ನೇ ಪಂದ್ಯ ನಡೆಯುತ್ತಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಮುಖಾಮುಖಿಯಾಗಿವೆ.

ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಬೌಲಿಂಗ್ ಆರಿಸಿಕೊಂಡಿದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ.

ಟೂರ್ನಿಯಲ್ಲಿನ ತನ್ನ ಮೊದಲ ಎರಡು ಪಂದ್ಯಗಳನ್ನು ಗೆದ್ದು ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದು, ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಗೆಲುವಿನ ಟ್ರ್ಯಾಕ್‌ಗೆ ಮರಳುವ ಯೋಜನೆಯಲ್ಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅತ್ತ ಟೂರ್ನಿಯಲ್ಲಿ ತನ್ನ ಮೊದಲ ಪಂದ್ಯ ಗೆದ್ದ ಮುಂಬೈ ಇಂಡಿಯನ್ಸ್ ನಂತರದ ಎರಡು ಪಂದ್ಯಗಳಲ್ಲಿ ಸೋಲುಂಡು ಅಂಕಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದೆ. ಹೀಗಾಗಿ ಈ ಪಂದ್ಯ ಮುಂಬೈ ಇಂಡಿಯನ್ಸ್‌ಗೂ ಸಹ ಮುಖ್ಯದ್ದಾಗಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡುವ ಬಳಗ: ಫಿಲಿಪ್ ಸಾಲ್ಟ್, ವಿರಾಟ್ ಕೊಹ್ಲಿ, ದೇವದತ್ತ್ ಪಡಿಕ್ಕಲ್, ರಾಜತ್ ಪಟೀದಾರ್ (ನಾಯಕ), ಟಿಮ್ ಡೇವಿಡ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರೊಮಾರಿಯೋ ಶೆಫರ್ಡ್, ಕ್ರುನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೇಕಬ್ ಡಫಿ, ಸುಯಶ್ ಶರ್ಮಾ

ಮುಂಬೈ ಇಂಡಿಯನ್ಸ್ ಆಡುವ ಬಳಗ: ರೋಹಿತ್ ಶರ್ಮಾ, ರೈನ್ ರಿಕೆಲ್ಟನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ನಮನ್ ಧೀರ್, ಮಿಚೆಲ್ ಸ್ಯಾಂಟ್ನರ್, ಶಾರ್ದುಲ್ ಠಾಕೂರ್, ಟ್ರೆಂಟ್ ಬೌಲ್ಟ್, ಮಯಾಂಕ್ ಮಾರ್ಕಂಡೆ, ಜಸ್ಪ್ರೀತ್ ಬುಮ್ರಾ

For Latest News Updates, Join Our Whatsapp Community🚩
Srinivasa A Kollegala
Srinivasa A Kollegala
Srinivasa A has over 6 years of experience in journalism. He has worked as a Social Media Executive at OneIndia, Sub-Editor at MyKhel and Filmibeat Kannada, and led the digital team at Andolana newspaper as Digital Head.
RELATED ARTICLES

LEAVE A REPLY

Please enter your comment!
Please enter your name here

Most Popular