HomeIPL 2026IPL 2026: ಮಳೆಯಿಂದಾಗಿ ತಡವಾಗಿ ಆರಂಭಗೊಂಡ ಆರ್‌ಸಿಬಿ vs ರಾಜಸ್ಥಾನ್ ಪಂದ್ಯ; ತಂಡ ಸೇರಿದ ಹೇಜಲ್‌ವುಡ್,...

IPL 2026: ಮಳೆಯಿಂದಾಗಿ ತಡವಾಗಿ ಆರಂಭಗೊಂಡ ಆರ್‌ಸಿಬಿ vs ರಾಜಸ್ಥಾನ್ ಪಂದ್ಯ; ತಂಡ ಸೇರಿದ ಹೇಜಲ್‌ವುಡ್, ಆತ ಹೊರಕ್ಕೆ!

ಗುವಾಹಟಿಯ ಬರ್ಸಾಪರ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 2026ರ ಲೀಗ್ ಹಂತದ 16ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿವೆ.

ಮಳೆ ಕಾರಣದಿಂದಾಗಿ ಅರ್ಧ ಗಂಟೆ ತಡವಾಗಿ ಪಂದ್ಯ ಆರಂಭಗೊಂಡಿದ್ದು, ಪಂದ್ಯದಲ್ಲಿ ಟಾಸ್ ಗೆದ್ದಿರುವ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ರಿಯಾನ್ ಪರಾಗ್ ಬೌಲಿಂಗ್ ಆರಿಸಿಕೊಂಡು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದಾರೆ.

ಉಭಯ ತಂಡಗಳ ಆಡುವ ಬಳಗದಲ್ಲಿ ತಲಾ ಒಂದು ಬದಲಾವಣೆಯಾಗಿದ್ದು, ರಾಜಸ್ಥಾನ್ ರಾಯಲ್ಸ್ ತಂಡದಲ್ಲಿ ತುಷಾರ್ ದೇಶಪಾಂಡೆ ಬದಲಾಗಿ ಬ್ರಿಜೇಶ್ ಪ್ರವೇಶ ಪಡೆದುಕೊಂಡಿದ್ದಾರೆ. ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಜೋಶ್ ಹೇಜಲ್‌ವುಡ್ ಆಗಮಿಸಿದ್ದು, ಜೇಕಬ್ ಡಫಿ ಹೊರಗುಳಿದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜಸ್ಥಾನ್ ರಾಯಲ್ಸ್ ಆಡುವ ಬಳಗ: ಯಶಸ್ವಿ ಜೈಸ್ವಾಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರಿಯಾನ್ ಪರಾಗ್ (ನಾಯಕ), ಶಿಮ್ರಾನ್ ಹೆಟ್ಮೈಯರ್, ಡೊನೋವನ್ ಫೆರೀರಾ, ರವೀಂದ್ರ ಜಡೇಜಾ, ಜೋಫ್ರಾ ಆರ್ಚರ್, ನಾಂಡ್ರೆ ಬರ್ಗರ್, ಸಂದೀಪ್ ಶರ್ಮಾ, ರವಿ ಬಿಷ್ಣೋಯ್, ಬ್ರಿಜೇಶ್ ಶರ್ಮಾ

ರಾಯಲ್ ಚಾಲೆಂಜರ್ಸ್ ಬೆಂಗಳುರು ಆಡುವ ಬಳಗ: ವಿರಾಟ್ ಕೊಹ್ಲಿ, ಫಿಲಿಪ್ ಸಾಲ್ಟ್, ದೇವದತ್ತ್ ಪಡಿಕ್ಕಲ್, ರಜತ್ ಪಟೀದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ರೊಮಾರಿಯೋ ಶೆಪರ್ಡ್, ಕ್ರುನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಅಭಿನಂದನ್ ಸಿಂಗ್, ಜೋಶ್ ಹ್ಯಾಜಲ್‌ವುಡ್

For Latest News Updates, Join Our Whatsapp Community🚩
Srinivasa A Kollegala
Srinivasa A Kollegala
Srinivasa A has over 6 years of experience in journalism. He has worked as a Social Media Executive at OneIndia, Sub-Editor at MyKhel and Filmibeat Kannada, and led the digital team at Andolana newspaper as Digital Head.
RELATED ARTICLES

LEAVE A REPLY

Please enter your comment!
Please enter your name here

Most Popular