ಬಹು ನಿರೀಕ್ಷಿತ 19ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಆರಂಭವಾಗಿದ್ದು, ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿವೆ.
ಪಂದ್ಯದಲ್ಲಿ ಟಾಸ್ ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಟಿದಾರ್ ಬೌಲಿಂಗ್ ಆರಿಸಿಕೊಂಡಿದ್ದು, ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದಾರೆ.
ಸನ್ ರೈಸರ್ಸ್ ಹೈದರಾಬಾದ್ ಆಡುವ ಬಳಗ: ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ಈಶಾನ್ ಕಿಶನ್ (ನಾಯಕ ಹಾಗೂ ವಿಕೆಟ್ ಕೀಪರ್), ಹೈನ್ರಿಚ್ ಕ್ಲಾಸೆನ್, ಅನಿಕೇತ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಸಲೀಲ್ ಅರೋರಾ, ಹರ್ಷ್ ದುಬೇ, ಹರ್ಷಲ್ ಪಟೇಲ್, ಜಯದೇವ್ ಉನಡ್ಕಟ್, ಈಶಾನ್ ಮಲಿಂಗಾ
ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಡುವ ಬಳಗ: ವಿರಾಟ್ ಕೊಹ್ಲಿ, ಫಿಲಿಪ್ ಸಾಲ್ಟ್, ರಾಜತ್ ಪಟೀದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ರೊಮಾರಿಯೋ ಶೆಪರ್ಡ್, ಕ್ರುನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಅಭಿನಂದನ್ ಸಿಂಗ್, ಜೇಕಬ್ ಡಫಿ, ಸುಯಶ್ ಶರ್ಮಾ

