HomeLatest NewsIPL 2026: ಸೂರ್ಯವಂಶಿ ಆರ್ಭಟಕ್ಕೆ ನಲುಗಿದ ಲಕ್ನೋ; ಪ್ಲೇಆಫ್ ಆಸೆಯಲ್ಲಿ ರಾಜಸ್ಥಾನ್ ಸೋಲಿಗಾಗಿ ಕಾಯುತ್ತಿದ್ದ ಆ...

IPL 2026: ಸೂರ್ಯವಂಶಿ ಆರ್ಭಟಕ್ಕೆ ನಲುಗಿದ ಲಕ್ನೋ; ಪ್ಲೇಆಫ್ ಆಸೆಯಲ್ಲಿ ರಾಜಸ್ಥಾನ್ ಸೋಲಿಗಾಗಿ ಕಾಯುತ್ತಿದ್ದ ಆ 4 ತಂಡಗಳು ಕಂಗಾಲು!

ನಿನ್ನೆ ( ಮೇ 19 ) ಜೈಪುರದ ಸವಾಯಿ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026ರ ಲೀಗ್ ಹಂತದ 64ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ತಂಡ 7 ವಿಕೆಟ್‌ಗಳ ಭರ್ಜರಿ ಗೆಲುವನ್ನು ದಾಖಲಿಸಿದೆ. ಈ ಮೂಲಕ ಅಂಕಪಟ್ಟಿಯಲ್ಲಿ 14 ಅಂಕ ಸಂಪಾದಿಸಿದ ರಾಜಸ್ಥಾನ್ ತನ್ನ ಉಳಿದ ಪಂದ್ಯ ಗೆದ್ದರೆ ಪ್ಲೇಆಫ್ ಪ್ರವೇಶ ಪಡೆದುಕೊಳ್ಳುವುದು ಪಕ್ಕಾ ಆಗಿದ್ದು, ರಾಜಸ್ಥಾನ್ ಸೋಲಿಗಾಗಿ ಕಾಯುತ್ತಿದ್ದ ಉಳಿದ ತಂಡಗಳಿಗೆ ಭಾರೀ ಹಿನ್ನಡೆಯುಂಟಾಗಿದೆ.

ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ಮಿಚೆಲ್ ಮಾರ್ಷ್ ಹಾಗೂ ಜೋಶ್ ಇಂಗ್ಲಿಸ್ ಅಬ್ಬರದ ಆಟದ ನೆರವಿನಿಂದ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 220 ರನ್ ಕಲೆಹಾಕಿ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ 221 ರನ್‌ಗಳ ಸವಾಲಿನ ಗುರಿಯನ್ನು ನೀಡಿತು. ಈ ಗುರಿಯನ್ನು ಬೆನ್ನಟ್ಟಿದ ರಾಜಸ್ಥಾನ್ ರಾಯಲ್ಸ್ ವೈಭವ್ ಸೂರ್ಯವಂಶಿ ಅಬ್ಬರದ ಬ್ಯಾಟಿಂಗ್, ಯಶಸ್ವಿ ಜೈಸ್ವಾಲ್ ಹಾಗೂ ಧ್ರುವ್ ಜುರೆಲ್ ಜವಾಬ್ದಾರಿಯುತ ಆಟದ ನೆರವಿನಿಂದ 19.1 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 225 ರನ್ ಬಾರಿಸಿತು.

ಲಕ್ನೋ ಸೂಪರ್ ಜೈಂಟ್ಸ್ ಇನ್ನಿಂಗ್ಸ್: ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ಮಿಚೆಲ್ ಮಾರ್ಷ್ ಹಾಗೂ ಜೋಶ್ ಇಂಗ್ಲಿಸ್ 50 ಎಸೆತಗಳಲ್ಲಿ 109 ರನ್‌ಗಳ ಜತೆಯಾಟವನ್ನಾಡುವ ಮೂಲಕ ಉತ್ತಮ ಆರಂಭವನ್ನು ಕಟ್ಟಿಕೊಟ್ಟರು. ಜೋಶ್ ಇಂಗ್ಲಿಸ್ 29 ಎಸೆತಗಳಲ್ಲಿ 7 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 60 ರನ್ ಚಚ್ಚಿದರೆ, ಮಿಚೆಲ್ ಮಾರ್ಷ್ 57 ಎಸೆತಗಳಲ್ಲಿ 11 ಬೌಂಡರಿ ಹಾಗೂ 5 ಸಿಕ್ಸರ್ ಸಹಿತ 96 ರನ್ ಬಾರಿಸಿ ಶತಕ ವಂಚಿತರಾದರು. ಇನ್ನುಳಿದಂತೆ ನಿಕೋಲಸ್ ಪೂರನ್ 16, ರಿಷಬ್ ಪಂತ್ 35, ಅಬ್ದುಲ್ ಸಮದ್ ಯಾವುದೇ ರನ್ ಗಳಿಸದೇ ಅಜೇಯರಾಗಿ ಉಳಿದರು ಹಾಗೂ ಆಯುಷ್ ಬದೋನಿ ಡಕ್‌ಔಟ್ ಆದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜಸ್ಥಾನ್ ರಾಯಲ್ಸ್ ಪರ ಯಶ್ ರಾಜ್ ಪೂಂಜಾ ಎರಡು ವಿಕೆಟ್ ಹಾಗೂ ಜೋಫ್ರಾ ಆರ್ಚರ್ ಒಂದು ವಿಕೆಟ್ ಪಡೆದರು.

ರಾಜಸ್ಥಾನ್ ರಾಯಲ್ಸ್ ಇನ್ನಿಂಗ್ಸ್: ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ 23 ಎಸೆತಗಳಲ್ಲಿ 43 ರನ್ ಗಳಿಸಿದರೆ, ವೈಭವ್ ಸೂರ್ಯವಂಶಿ 38 ಎಸೆತಗಳಲ್ಲಿ 7 ಬೌಂಡರಿ ಹಾಗೂ 10 ಸಿಕ್ಸರ್ ಸಹಿತ 93 ರನ್ ಬಾರಿಸಿ ಶತಕ ಮಿಸ್ ಮಾಡಿಕೊಂಡರು. ಇನ್ನುಳಿದಂತೆ ಧ್ರುವ್ ಜುರೆಲ್ 38 ಎಸೆತಗಳಲ್ಲಿ ಅಜೇಯ 53, ಲ್ಹಾನ್ ಡ್ರೆ ಪ್ರೆಟೊರಿಯಸ್ 7 ಹಾಗೂ ಡೊನೊವನ್ ಫೆರೇರಾ ಅಜೇಯ 16 ರನ್ ಕಲೆಹಾಕಿದರು.

ಲಕ್ನೋ ಸೂಪರ್ ಜೈಂಟ್ಸ್ ಪರ ಆಕಾಶ್ ಮಹಾರಾಜ್ ಸಿಂಗ್ ಹಾಗೂ ಮೊಹ್ಸಿನ್ ಖಾನ್ ತಲಾ ಒಂದೊಂದು ವಿಕೆಟ್ ಪಡೆದರು.

For Latest News Updates, Join Our Whatsapp Community🚩
Srinivasa A Kollegala
Srinivasa A Kollegala
Srinivasa A has over 6 years of experience in journalism. He has worked as a Social Media Executive at OneIndia, Sub-Editor at MyKhel and Filmibeat Kannada, and led the digital team at Andolana newspaper as Digital Head.
RELATED ARTICLES

LEAVE A REPLY

Please enter your comment!
Please enter your name here

Most Popular