ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇಂದು ( ಏಪ್ರಿಲ್ 13 ) ಐಪಿಎಲ್ 2026ರ ಲೀಗ್ ಹಂತದ 21ನೇ ಪಂದ್ಯ ನಡೆಯುತ್ತಿದ್ದು, ರಾಜಸ್ಥಾನ್ ರಾಯಲ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿವೆ.
ಪಂದ್ಯದಲ್ಲಿ ಟಾಸ್ ಗೆದ್ದಿರುವ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ರಿಯಾನ್ ಪರಾಗ್ ಬೌಲಿಂಗ್ ಆರಿಸಿಕೊಂಡು ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದಾರೆ.
ಟೂರ್ನಿಯಲ್ಲಿ ಇಲ್ಲಿಯವರೆಗೂ ಆಡಿರುವ ಎಲ್ಲ ನಾಲ್ಕು ಪಂದ್ಯಗಳಲ್ಲಿಯೂ ಗೆದ್ದು 8 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ಈ ಪಂದ್ಯದಲ್ಲಿ ಗೆದ್ದು ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರಿಸುವತ್ತ ಚಿತ್ತ ನೆಟ್ಟಿದ್ದರೆ, ಟೂರ್ನಿಯಲ್ಲಿ ಆಡಿರುವ ನಾಲ್ಕು ಪಂದ್ಯಗಳ ಪೈಕಿ ಒಂದರಲ್ಲಿ ಗೆದ್ದು ಮೂರರಲ್ಲಿ ಸೋತಿರುವ ಸನ್ ರೈಸರ್ಸ್ ಹೈದರಾಬಾದ್ ಟೇಬಲ್ ಟಾಪರ್ಸ್ ವಿರುದ್ಧ ಗೆದ್ದು ಲಯಕ್ಕೆ ಮರಳುವ ಯತ್ನದಲ್ಲಿದೆ.
ಸನ್ ರೈಸರ್ಸ್ ಹೈದರಾಬಾದ್ ಆಡುವ ಬಳಗ: ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ಇಶಾನ್ ಕಿಶನ್ (ವಿಕೆಟ್ ಕೀಪರ್ ಹಾಗೂ ನಾಯಕ), ಹೈನ್ರಿಚ್ ಕ್ಲಾಸೆನ್, ಸಲೀಲ್ ಅರೋರಾ, ಅನಿಕೇತ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಹರ್ಷ್ ದುಬೇ, ಶಿವಾಂಗ್ ಕುಮಾರ್, ಪ್ರಫುಲ್ ಹಿಂಗೆ, ಈಶಾನ್ ಮಲಿಂಗಾ
ರಾಜಸ್ಥಾನ್ ರಾಯಲ್ಸ್ ಆಡುವ ಬಳಗ: ಯಶಸ್ವಿ ಜೈಸ್ವಾಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರಿಯಾನ್ ಪರಾಗ್ (ನಾಯಕ), ಲುವಾನ್-ಡ್ರೆ ಪ್ರೀಟೋರಿಯಸ್, ಡೊನೋವನ್ ಫೆರೀರಾ, ರವೀಂದ್ರ ಜಾಡೇಜಾ, ಜೋಫ್ರಾ ಆರ್ಚರ್, ನಾಂಡ್ರೆ ಬರ್ಗರ್, ಸಂದೀಪ್ ಶರ್ಮಾ, ರವಿ ಬಿಷ್ಣೋಯ್, ತುಷಾರ್ ದೇಶಪಾಂಡೆ

