HomeIPL 2026IPL 2026: ಗುಜರಾತ್ ವಿರುದ್ಧ ಸೋತು ಫೈನಲ್‌ಗೇರದೇ ಟೂರ್ನಿಯಿಂದ ಹೊರಬಿದ್ದ ರಾಜಸ್ಥಾನ್; ಮೈದಾನದಲ್ಲೇ ಗಳಗಳನೆ ಕಣ್ಣೀರಿಟ್ಟ...

IPL 2026: ಗುಜರಾತ್ ವಿರುದ್ಧ ಸೋತು ಫೈನಲ್‌ಗೇರದೇ ಟೂರ್ನಿಯಿಂದ ಹೊರಬಿದ್ದ ರಾಜಸ್ಥಾನ್; ಮೈದಾನದಲ್ಲೇ ಗಳಗಳನೆ ಕಣ್ಣೀರಿಟ್ಟ ವೈಭವ್

ನಿನ್ನೆ ( ಮೇ 29 ) ಮುಲ್ಲಾನ್‌ಪುರದ ಮಹಾರಾಜ ಯದವೀಂದ್ರ ಸಿಂಗ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026ರ ಎರಡನೇ ಕ್ವಾಲಿಫಯರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಗುಜರಾತ್ ಟೈಟನ್ಸ್ 7 ವಿಕೆಟ್‌ಗಳ ಗೆಲುವನ್ನು ದಾಖಲಿಸಿ ಫೈನಲ್ ಪ್ರವೇಶ ಮಾಡಿತು.

ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ರಾಜಸ್ಥಾನ್ ರಾಯಲ್ಸ್ ವೈಭವ್ ಸೂರ್ಯವಂಶಿ, ಡೊನೊವೆನ್ ಫೆರೇರಾ ಅಬ್ಬರದ ಬ್ಯಾಟಿಂಗ್ ಹಾಗೂ ರವೀಂದ್ರ ಜಡೇಜಾ ಜವಾಬ್ದಾರಿಯುತ ಆಟದ ನೆರವಿನಿಂದ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 214 ರನ್ ಕಲೆಹಾಕಿದ್ದು, ಗುಜರಾತ್ ಟೈಟನ್ಸ್‌ಗೆ 215 ರನ್‌ಗಳ ಸವಾಲಿನ ಗುರಿಯನ್ನು ನೀಡಿತು. ಈ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿದ ಗುಜರಾತ್ ಟೈಟನ್ಸ್ ಆರಂಭಿಕರಾದ ಶುಬ್‌ಮನ್ ಗಿಲ್ ಹಾಗೂ ಸಾಯಿ ಸುದರ್ಶನ್ ಉತ್ತಮ ಆಟದ ನೆರವಿನಿಂದ 18.4 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 219 ರನ್ ಕಲೆಹಾಕಿತು.

ಈ ಗೆಲುವಿನೊಂದಿಗೆ ಗುಜರಾತ್ ಟೈಟನ್ಸ್ ಫೈನಲ್ ಪ್ರವೇಶಿಸಿದ್ದು, ನಾಳೆ ( ಮೇ 31 ) ಅಹ್ಮದಾಬಾದ್‌ನಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ. ಇನ್ನು ಪಂದ್ಯದಲ್ಲಿ ಸೋತ ರಾಜಸ್ಥಾನ್ ರಾಯಲ್ಸ್ ಟೂರ್ನಿಯಿಂದ ಹೊರಬಿದ್ದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಟೂರ್ನಿಯುದ್ದಕ್ಕೂ ತಂಡದ ಪರ ಉತ್ತಮ ಆಟವನ್ನಾಡುತ್ತಾ ಬಂದ ವೈಭವ್ ಸೂರ್ಯವಂಶಿ ಈ ಪಂದ್ಯದಲ್ಲೂ ತಂಡ ಆರಂಭಿಕ ಆಘಾತ ಅನುಭವಿಸಿದರೂ 47 ಎಸೆತಗಳಲ್ಲಿ 96 ರನ್ ಬಾರಿಸಿ ಉತ್ತಮ ಆಟವನ್ನಾಡಿದರಾದರೂ ತಂಡ ಗೆಲ್ಲದ ಕಾರಣ ಮೈದಾನದಲ್ಲೇ ಕಣ್ಣೀರಿಟ್ಟಿದ್ದಾರೆ. ಪಂದ್ಯದಲ್ಲಿ ಸೋಲು ಅನುಭವಿಸುತ್ತಿದ್ದಂತೆ ಮೈದಾನದಲ್ಲಿಯೇ ಕುಳಿತು ವೈಭವ್ ಕಣ್ಣೀರು ಹಾಕಿರುವ ವಿಡಿಯೊ ವೈರಲ್ ಆಗಿದೆ.

For Latest News Updates, Join Our Whatsapp Community🚩
Srinivasa A Kollegala
Srinivasa A Kollegala
Srinivasa A has over 6 years of experience in journalism. He has worked as a Social Media Executive at OneIndia, Sub-Editor at MyKhel and Filmibeat Kannada, and led the digital team at Andolana newspaper as Digital Head.
RELATED ARTICLES

LEAVE A REPLY

Please enter your comment!
Please enter your name here

Most Popular