HomeIPL 2026IPL 2026: ರಾಜಸ್ಥಾನ್ ಬೌಲಿಂಗ್ ದಾಳಿಗೆ ತತ್ತರಿಸಿ 7 ವಿಕೆಟ್ ಕಳೆದುಕೊಂಡು ಅಚ್ಚರಿಯ ಇಂಪ್ಯಾಕ್ಟ್ ಪ್ಲೇಯರ್...

IPL 2026: ರಾಜಸ್ಥಾನ್ ಬೌಲಿಂಗ್ ದಾಳಿಗೆ ತತ್ತರಿಸಿ 7 ವಿಕೆಟ್ ಕಳೆದುಕೊಂಡು ಅಚ್ಚರಿಯ ಇಂಪ್ಯಾಕ್ಟ್ ಪ್ಲೇಯರ್ ಕಣಕ್ಕಿಳಿಸಿದ ಆರ್‌ಸಿಬಿ

ಗುವಾಹಟಿಯ ಬರ್ಸಾಪರ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 2026ರ ಲೀಗ್ ಹಂತದ 16ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾಗಿವೆ.

ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆರಂಭಿಕ ಆಘಾತ ಅನುಭವಿಸಿ 14 ಓವರ್ ಮುಗಿಯುವಷ್ಟರಲ್ಲಿ 7 ವಿಕೆಟ್ ನಷ್ಟಕ್ಕೆ 125 ರನ್ ಗಳಿಸಿದ್ದು, ಈ ಸಂದರ್ಭದಲ್ಲಿ ಆರ್‌ಸಿಬಿ ಇಂಪ್ಯಾಕ್ಟ್ ಪ್ಲೇಯರ್ ಕಣಕ್ಕಿಳಿಸಿ ಉಳಿದ ಓವರ್‌ಗಳಲ್ಲಿ ಇನ್ನಿಂಗ್ಸ್ ಕಟ್ಟುವ ನಿರ್ಧಾರ ಮಾಡಿದೆ.

ಈ ಬಾರಿಯ ಹರಾಜಿನಲ್ಲಿ ತಂಡ ಸೇರಿದ್ದ ವೆಂಕಟೇಶ್ ಐಯ್ಯರ್ ಅವರನ್ನು ಕಣಕ್ಕಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರ್‌ಸಿಬಿ ಪರ ಆರಂಭಿಕರಾಗಿ ಫಿಲ್ ಸಾಲ್ಟ್ ಹಾಗೂ ವಿರಾಟ್ ಕೊಹ್ಲಿ ಕಣಕ್ಕಿಳಿದರು. ಜೋಫ್ರಾ ಆರ್ಚರ್ ಎಸೆದ ಇನ್ನಿಂಗ್ಸ್‌ನ ಮೊದಲ ಎಸೆತದಲ್ಲೇ ಫಿಲ್ ಸಾಲ್ಟ್ ಕ್ಯಾಚ್ ನೀಡಿ ವಿಕೆಟ್ ಒಪ್ಪಿಸಿದರು. ಹೀಗೆ ಮೊದಲ ಎಸೆತದಲ್ಲೇ ವಿಕೆಟ್ ಒಪ್ಪಿಸಿದ ಆರ್‌ಸಿಬಿ ಪರ ಎರಡನೇ ವಿಕೆಟ್‌ಗೆ ಜತೆಯಾದ ಕೊಹ್ಲಿ ಹಾಗೂ ದೇವದತ್ ಪಡಿಕ್ಕಲ್ 45 ರನ್‌ಗಳ ಜತೆಯಾಟವನ್ನಾಡಿದರು. ಪಡಿಕ್ಕಲ್ 7 ಎಸೆತಗಳಲ್ಲಿ 14 ರನ್ ಗಳಿಸಿದರು. ಬೆನ್ನಲ್ಲೇ ಕೊಹ್ಲಿ 16 ಎಸೆತಗಳಲ್ಲಿ 32 ರನ್ ಗಳಿಸಿ ರವಿ ಬಿಷ್ಣೋಯಿಗೆ ಕ್ಲೀನ್ ಬೌಲ್ಡ್ ಆದರು. ನಂತರ ಕೃನಾಲ್ ಪಾಂಡ್ಯ ಕೇವಲ 1 ರನ್‌ಗೆ ವಿಕೆಟ್ ಒಪ್ಪಿಸಿದರು. ಬಳಿಕ ಜಿತೇಶ್ ಶರ್ಮಾ 5 ಹಾಗೂ ಟಿಮ್ ಡೇವಿಡ್ 13 ರನ್‌ಗೆ ಔಟ್ ಆದರು. ನಂತರ ಕಣಕ್ಕಿಳಿದ ರೊಮಾರಿಯೊ ಶೆಫರ್ಡ್ 11 ಎಸೆತಗಳಲ್ಲಿ 22 ರನ್ ಗಳಿಸಿದರಾದರೂ ಹೆಚ್ಚುಕಾಲ ಕಣದಲ್ಲಿ ಉಳಿಯಲಿಲ್ಲ. ಹೀಗೆ 127 ರನ್‌ಗೆ 7 ವಿಕೆಟ್ ಕಳೆದುಕೊಂಡಿತು. ಹೀಗೆ ಒಂದೆಡೆ ವಿಕೆಟ್ ಬೀಳುತ್ತಿದ್ದರೆ ಮತ್ತೊಂದೆಡೆ ನಾಯಕ ರಜತ್ ಪಟಿದಾರ್ ಏಕಾಂಗಿ ಹೋರಾಟ ನಡೆಸಿದರು. ಈ ಸಮಯದಲ್ಲಿ ಪಟಿದಾರ್‌ ಜತೆ ಮತ್ತೊಬ್ಬ ಬ್ಯಾಟಿಂಗ್ ಸಾಮರ್ಥ್ಯವಿರುವ ಆಟಗಾರ ಬೇಕೆಂದು ವೆಂಕಟೇಶ್ ಐಯ್ಯರ್‌ರನ್ನು ಕರೆತರಲಾಯಿತು.

For Latest News Updates, Join Our Whatsapp Community🚩
Srinivasa A Kollegala
Srinivasa A Kollegala
Srinivasa A has over 6 years of experience in journalism. He has worked as a Social Media Executive at OneIndia, Sub-Editor at MyKhel and Filmibeat Kannada, and led the digital team at Andolana newspaper as Digital Head.
RELATED ARTICLES

LEAVE A REPLY

Please enter your comment!
Please enter your name here

Most Popular