HomeIPL 2026IPL 2026: ಡೆಲ್ಲಿ ವಿರುದ್ಧ ಪವರ್‌ಪ್ಲೇನಲ್ಲೇ ವಿಕೆಟ್ ಒಪ್ಪಿಸಿದ ಕೊಹ್ಲಿ; ಆರೆಂಜ್ ಕ್ಯಾಪ್ ಜಸ್ಟ್ ಮಿಸ್

IPL 2026: ಡೆಲ್ಲಿ ವಿರುದ್ಧ ಪವರ್‌ಪ್ಲೇನಲ್ಲೇ ವಿಕೆಟ್ ಒಪ್ಪಿಸಿದ ಕೊಹ್ಲಿ; ಆರೆಂಜ್ ಕ್ಯಾಪ್ ಜಸ್ಟ್ ಮಿಸ್

ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಲೀಗ್ ಹಂತದ 26ನೇ ಪಂದ್ಯ ಇಂದು ( ಏಪ್ರಿಲ್ 18 ) ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಿವೆ.

ಪಂದ್ಯದಲ್ಲಿ ಟಾಸ್ ಗೆದ್ದಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕ ಅಕ್ಷರ್ ಪಟೇಲ್ ಬೌಲಿಂಗ್ ಆರಿಸಿಕೊಂಡಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ.

ಅದರಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆರಂಭಿಕರಾಗಿ ಫಿಲ್ ಸಾಲ್ಟ್ ಹಾಗೂ ವಿರಾಟ್ ಕೊಹ್ಲಿ ಕಣಕ್ಕಿಳಿದರು. ನಿಧಾನವಾಗಿ ಇನ್ನಿಂಗ್ಸ್ ಆರಂಭಿಸಿದ ಈ ಜೋಡಿ ಜಾಗರೂಕತೆಯಿಂದ ಬ್ಯಾಟ್ ಬೀಸುತ್ತಾ ಐದು ಓವರ್‌ಗಳಲ್ಲೇ ಅರ್ಧಶತಕದ ಜತೆಯಾಟ ಪೂರೈಸಿತು. ಆದರೆ ಲುಂಗಿ ಎನ್‌ಗಿಡಿ ಎಸೆದ ಐದನೇ ಓವರ್‌ನ ಮೊದಲ ಎಸೆತದಲ್ಲಿ ಕೊಹ್ಲಿ ಸಿಕ್ಸರ್ ಬಾರಿಸಲು ಯತ್ನ ಮಾಡಲು ಹೋಗಿ ಕ್ಯಾಚ್ ನೀಡಿ ಔಟ್ ಆದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಮೂಲಕ ಕೊಹ್ಲಿ 13 ಎಸೆತಗಳಲ್ಲಿ 19 ರನ್ ಬಾರಿಸಿ ಪೆವಿಲಿಯನ್ ಸೇರಿಕೊಂಡು ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರುವ ಅವಕಾಶವನ್ನು ಐದು ರನ್‌ಗಳಿಂದ ಕೈತಪ್ಪಿಸಿಕೊಂಡಿದ್ದಾರೆ. ಟೂರ್ನಿಯಲ್ಲಿ ಇಲ್ಲಿಯವರೆಗೂ ಒಟ್ಟು 6 ಪಂದ್ಯಗಳನ್ನಾಡಿರುವ ಕೊಹ್ಲಿ 247 ರನ್ ಬಾರಿಸಿದ್ದು, ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಇನ್ನು ಗುಜರಾತ್ ಟೈಟನ್ಸ್ ತಂಡದ ನಾಯಕ ಶುಬ್‌ಮನ್ ಗಿಲ್ 4 ಪಂದ್ಯಗಳಲ್ಲಿ 251 ರನ್‌ಗಳನ್ನು ಕಲೆಹಾಕಿದ್ದಾರೆ.

For Latest News Updates, Join Our Whatsapp Community🚩
Srinivasa A Kollegala
Srinivasa A Kollegala
Srinivasa A has over 6 years of experience in journalism. He has worked as a Social Media Executive at OneIndia, Sub-Editor at MyKhel and Filmibeat Kannada, and led the digital team at Andolana newspaper as Digital Head.
RELATED ARTICLES

LEAVE A REPLY

Please enter your comment!
Please enter your name here

Most Popular