ಭಾನುವಾರ ( ಏಪ್ರಿಲ್ 5 ) ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026ರ ಲೀಗ್ ಹಂತದ 11ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಬದ್ಧ ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 43 ರನ್‌ಗಳ ಅಂತರದ ಭರ್ಜರಿ ಗೆಲುವನ್ನು ಸಾಧಿಸಿತು.
ಪಂದ್ಯ ಮುಗಿಯುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಪಂದ್ಯದ ಕುರಿತ ಚರ್ಚೆಗಳು, ಟ್ರೋಲ್‌ಗಳು ದೊಡ್ಡ ಮಟ್ಟದಲ್ಲಿ ಹರಿದಾಡುತ್ತಿದ್ದು, ವಿಶೇಷವಾಗಿ ವಿರಾಟ್ ಕೊಹ್ಲಿ ಅಗ್ರೆಷನ್ ವಿಡಿಯೊಗಳು ಸಾಕಷ್ಟು ಸದ್ದು ಮಾಡುತ್ತಿವೆ.
ಕ್ರಿಕೆಟ್ ಲೆಜೆಂಡ್ ಮುತ್ತಯ್ಯ ಮುರಳೀಧರನ್ ಒಮ್ಮೆ ಸಂದರ್ಶನದಲ್ಲಿ ಹೇಳಿದಂತೆ ವಿರಾಟ್ ಕೊಹ್ಲಿ ವಿಕೆಟ್ ಪಡೆದ ಬೌಲರ್‌ಗಿಂತ ಹೆಚ್ಚು ಸಂಭ್ರಮಾಚರಣೆ ಮಾಡುತ್ತಾರೆ. ಅದೇ ರೀತಿ ಈ ಪಂದ್ಯದಲ್ಲೂ ಸಹ ಕೊಹ್ಲಿ ಚೆನ್ನೈ ಆಟಗಾರರ ವಿಕೆಟ್ ಉರುಳಿದಾಗ ಕಿರುಚಿ ಕುಣಿದು ಸಂಭ್ರಮಿಸಿದರು.
ಆದರೆ ಕೊಹ್ಲಿ ಸಂಜು ಸ್ಯಾಮ್ಸನ್ ವಿಕೆಟ್ ಕಳೆದುಕೊಂಡಾಗ ಮಾತ್ರ ಸಪ್ಪೆ ಮುಖ ಹಾಕಿ ನಿಂತುಬಿಟ್ಟರು. ಈ ವಿಡಿಯೊ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಇನ್ನೂ ಕೆಲವರು ಸಂಜು ಸ್ಯಾಮ್ಸನ್ ವಿಕೆಟ್ ಬಿದ್ದಾಗಲೂ ಕೊಹ್ಲಿ ಅದೇ ರೀತಿ ಸಂಭ್ರಮಿಸಿದ್ದಾರೆ ಎಂದು ವಿಡಿಯೊವನ್ನು ಹಂಚಿಕೊಳ್ಳುತ್ತಿದ್ದಾರೆ. ಅಸಲಿಗೆ ಅದು ರುತುರಾಜ್ ಗಾಯಕ್ವಾಡ್ ವಿಕೆಟ್‌ಗೆ ಸಂಭ್ರಮಿಸಿದ ವಿಡಿಯೊವಾಗಿದೆ.

